ಕರ್ನಾಟಕಕ್ಕೆ ನುಗ್ಗುತ್ತೇವೆ, ನಮಗೆ ಯಾರ ಅನುಮತಿಯೂ ಬೇಕಿಲ್ಲ : ಸಂಜಯ್ ರಾವತ್

ನವದೆಹಲಿ, ಡಿ.21-ಚೀನಾದ ಮಾದರಿಯಲ್ಲಿ ನಾವು, ಕರ್ನಾಟಕಕ್ಕೆ ನುಗ್ಗುತ್ತೇವೆ. ನಮಗೆ ಯಾರ ಅನುಮತಿಯೂ ಬೇಕಿಲ್ಲ ಎಂದು ಮಹಾರಾಷ್ಟ್ರದ ಶಿವಸೇನೆ ಉದ್ಧವ್‍ಠಾಕ್ರೆ ಬಣದ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಹೇಳಿದ್ದಾರೆ. ಸಂಜಯ್ ರಾವತ್ ಅವರ ಉದ್ಧಟತನ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ, ಎರಡು ರಾಜ್ಯಗಳ ಗಡಿ ವಿವಾದಕ್ಕೆ ಮತ್ತಷ್ಟು ತುಪ್ಪ ಸುರಿದಂತಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಜಯ್ ರಾವತ್, ನಾವು ಚರ್ಚೆಯ ಮೂಲಕ ವಿವಾದವನ್ನು ಬಗೆ ಹರಿಸಿಕೊಳ್ಳಬೇಕು ಎಂದು ಬಯಸುತ್ತೇವೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಬೆಂಕಿ ಹಚ್ಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ […]