ಸಂಪುಟ ಪುನಾರಚನೆಗೆ ಸದ್ಯಕ್ಕೆ ಬ್ರೇಕ್, ಆಕಾಂಕ್ಷಿಗಳಿಗೆ ನಿರಾಸೆ..!

ಬೆಂಗಳೂರು,ಜ.17- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರಲು ಕಾತರದಿಂದ ಕಾಯುತ್ತಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೊಮ್ಮೆ ನಿರಾಶೆಯಾಗಿದೆ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ, ಪುನಾರಚನೆಗೆ ಚಿಂತನೆ ನಡೆಸಿದ್ದ ವರಿಷ್ಠರು, ಇದೀಗ ಪಂಚರಾಜ್ಯಗಳ ಚುನಾವಣೆಯತ್ತ ಗಮನ ಹರಿಸಿರುವುದರಿಂದ ಬಹುತೇಕ ರಾಜ್ಯ ಬಜೆಟ್ ಮಂಡನೆಯಾಗುವವರೆಗೂ ಕಾಯುವ ಅನಿವಾರ್ಯತೆ ಎದುರಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದ ನಂತರ ಬೊಮ್ಮಾಯಿ ಸಂಪುಟದಲ್ಲಿ ಮೇಜರ್ ಸರ್ಜರಿ ಮಾಡಿ, ಚುನಾವಣಾ ಸಂಪುಟ ರಚನೆಗೆ ನಡೆಸಲಾಗಿದ್ದ ಚಿಂತನೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ರಾಜ್ಯ ಬಿಜೆಪಿ ಘಟಕ ಹಾಗೂ ಸಂಘ […]

ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರಕ್ಕೆ ಹೊಸ ಲುಕ್

ಬೆಂಗಳೂರು, ಜ.11-ಮುಂದಿನ ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಬಿ. ಗರುಡಾಚಾರ್ ಭರವಸೆ ನೀಡಿದರು. ಕಲಾಸಿಪಾಳ್ಯದ ಪಾಪುರಲ್ ಆಟೊ ಮೊಬೈಲ್ ವೃತ್ತದಲ್ಲಿ ಕಮ್ಯುನಿಟಿ ಸಂಕ್ರಾಂತಿ ಸಂಭ್ರಮದ ವತಿಯಿಂದ ಆಯೋಜಿಸಿದ್ದ ಸಂಕ್ರಾಂತಿ ಉತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ನಾಲ್ಕೆ ೈದು ವರ್ಷಗಳ ಹಿಂದೆ, ಅಂದರೆ ನಾನು ಶಾಸಕನಾಗಿ ಬರುವ ಮೊದಲು ಸಾಕಷ್ಟು ಅವ್ಯವಸ್ಥೆಗಳಿದ್ದವು. ರಸ್ತೆಗಳು, ಒಳಚರಂಡಿ ವ್ಯವಸ್ಥೆಗಳು ತೀವ್ರ ಹದಗೆಟ್ಟಿದ್ದವು. ನಮ್ಮ […]