“ಸಂಸ್ಕೃತ ಭಾಷೆ ಮೇಲಿನ ಮಮತೆಯನ್ನು ತುಳು, ಕೊಡವ ಭಾಷೆಗಳ ಮೇಲೂ ತೋರಿಸಿ”

ಬೆಂಗಳೂರು, ಜ.18- ಬಿಜೆಪಿ ರಾಜ್ಯದ ಕೇವಲ 24,821 ಸಂಸ್ಕøತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನು ನಮ್ಮ ರಾಜ್ಯದಲ್ಲಿ ಮೂಲೆಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, 2011ರ ಜನಗಣತಿ ಪ್ರಕಾರ, ರಾಜ್ಯದಲ್ಲಿರುವ ಒಟ್ಟು ತುಳುವರ ಸಂಖ್ಯೆ 18,46,427 ಹಾಗೆಯೇ ಕೊಡವ ಭಾಷೆಯನ್ನಾಡುವವರ ಸಂಖ್ಯೆ 1,13,857. ಆದರೆ, ಸಂಸ್ಕøತ ಭಾಷೆಯನ್ನು ತಮ್ಮ ಮಾತೃಭಾಷೆಯೆಂದು ದಾಖಲಿಸಿದವರ ಸಂಖ್ಯೆ […]