ಶೀಘ್ರದಲ್ಲೇ ಸರ್ವರ್ ಗಳ ರಿಪೇರಿ ಮಾಡಲು ಸೂಚನೆ

ಬೆಂಗಳೂರು,ಫೆ.21-ಚಿಕ್ಕಮಗಳೂರು ಜಿಲ್ಲೆ ಮೂಡಗೆರೆ ತಾಲ್ಲೂಕಿನಲ್ಲಿ ದುರಸ್ತಿಯಲ್ಲಿರುವ ಸರ್ವರ್ಗಳನ್ನು ಶೀಘ್ರದಲ್ಲೇ ರಿಪೇರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಕಂದಾಯ ಸಚಿವ ಆರ್ ಅಶೋಕ್ ವಿಧಾನಸಭೆಗೆ ತಿಳಿಸಿದರು. ಶಾಸಕ ಕುಮಾರಸ್ವಾಮಿ.ಎಂ.ಪಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವು ತಾಂತ್ರಿಕ ಕಾರಣಗಳಿಂದ ಮೂಡಿಗೆರೆಯಲ್ಲಿ ಸರ್ವರ್ಗಳು ಕೆಟ್ಟು ಹೋಗಿರುವುದು ಗಮನಕ್ಕೆ ಬಂದಿದೆ. ಇದರಿಂದ ರೈತರಿಗೆ ತೊಂದರೆಯಾಗಿದೆ. ಶೀಘ್ರದಲ್ಲೇ ಇದನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಸೇವೆಗೆ ಅನುವು ಮಾಡಿಕೊಡಲು ಸಂಬಂಧಪಟ್ಟ ಅಕಾರಿಗಳಿಗೆ ಸೂಚನೆ ನೀಡುವುದಾಗಿ ಹೇಳಿದರು. ಕಳೆದ ಜುಲೈನಿಂದ ನವೆಂಬರ್ 21ರ ಅವಯಲ್ಲಿ ಚಿಕ್ಕಮಗಳೂರು […]