‘ಹಿಂದೂ’ ನಂತರ ‘ಸಾಂಭಾಜಿ’ ವಿವಾದಲ್ಲಿ ಸತೀಶ್ ಜಾರಕಿಹೊಳಿ

ಮುಂಬೈ,ನ.11- ಛತ್ರಪತಿ ಸಾಂಭಾಜಿ ಮಹಾರಾಜ್ ಕುರಿತಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಆಕ್ಷೇಪಾರ್ಹ ಹೇಳಿಕೆಗೆ ರಾಹುಲ್‍ಗಾಂಧಿ ಅವರ ಸಮ್ಮತಿ ಇದೆಯೇ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಶ್ನಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಳೆದ ಭಾನುವಾರ ಮಾತನಾಡಿದ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗಳು ವ್ಯಾಪಕ ವಿವಾದಕ್ಕೆ ಕಾರಣವಾಗಿದೆ. ಇದೇ ಕಾರ್ಯಕ್ರಮದಲ್ಲಿ ಹಿಂದೂ ಧರ್ಮದ ಕುರಿತು ಸತೀಶ್ ಜಾರಕಿಹೊಳಿ ಅವರು ನೀಡಿದ ಹೇಳಿಕೆ ರಾಜ್ಯದಲ್ಲೇ ಅಷ್ಟೇ ಅಲ್ಲ ರಾಷ್ಟ್ರ […]

ಮತ್ತೊಂದು ವಿವಾದ : `ಹಿಂದೂ’ ಶಬ್ದದ ಸತ್ಯಶೋಧನೆಗೆ ಮುಂದಾದ ಸತೀಶ್

ಬೆಂಗಳೂರು, ನ.10- ಪಕ್ಷಕ್ಕೆ ಹಾನಿಯಾಗಬಾರದು ಎಂಬ ಕಾರಣಕ್ಕೆ ನಾನು ನನ್ನ ಹೇಳಿಕೆಯನ್ನು ಹಿಂಪಡೆದಿದ್ದೇನೆ. ಆದರೆ ಮುಂದಿನ ದಿನಗಳಲ್ಲಿ ನನ್ನ ಮಾತುಗಳನ್ನು ಸಾಬೀತು ಪಡಿಸಲು ಪ್ರಯತ್ನಿಸುತ್ತೇನೆ. ಇದಕ್ಕೆ ಸಂಬಂಧ ಪಟ್ಟಂತೆ ಇತಿಹಾಸಕಾರರನ್ನು ಭೇಟಿಯಾಗುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಖಾಸಗಿ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ್ದೇನೆ. ಅದು ಇಷ್ಟು ದೊಡ್ಡ ವಿವಾದವಾಗಲಿದೆ ಎಂದು ಭಾವಿಸಿರಲಿಲ್ಲ. ಆದರೂ ಆಗಿ ಹೋಗಿದೆ. ಸತ್ಯಾಂಶ ಬಿಟ್ಟು ಏನೋನೋ ತಿರುಚಿ ವರದಿಯಾಗಿದೆ. ನಾನೊಬ್ಬನ್ನೇ ಆಗಿದ್ದರೆ ಕ್ಷಮೆ ಕೇಳುತ್ತಿರಲಿಲ್ಲ. […]

ಸತೀಶ್ ಜಾರಕಿಹೊಳಿ ವಿರುದ್ಧ ಭುಗಿಲೆದ್ದ ಆಕ್ರೋಶ

ಬೆಂಗಳೂರು,ನ.9- ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ರಾಜ್ಯಾದ್ಯಂತ ಬೀದಿಗಿಳಿದಿವೆ. ಹಿಂದೂ ಯುವ ಸೇನೆ, ಬಿಜೆಪಿ ಯುವ ಮೋರ್ಚಾ, ವಿಎಚ್‍ಪಿ ಸೇರಿದಂತೆ ಹಲವಾರು ಹಿಂದೂ ಸಂಘಟನೆಗಳು ಸತೀಶ್ ಜಾರಕಿಹೊಳಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ಬುಧವಾರವೂ ಪ್ರತಿಭಟನೆಯನ್ನು ತೀವ್ರಗೊಳಿಸಿವೆ.ರಾಜಧಾನಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ, ದಾಣಗೆರೆ, ಮಂಗಳೂರು ಸೇರಿದಂತೆ ಮತ್ತಿತರ ಕಡೆ ಸತೀಶ್ ಜಾರಕಿಹೊಳಿ ವಿರುದ್ಧ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಕೆಲವು ಕಡೆ […]

ಕ್ಷಮೆ ಕೇಳಲು ನಿರಾಕರಿಸಿದ ಸತೀಶ್ ಜಾರಕಿಹೊಳಿ, ತಮ್ಮದೇ ಪಕ್ಷದವರಿಗೂ ಟಾಂಗ್

ಬೆಂಗಳೂರು, ನ.9- ವಿವಾದಿತ ಹೇಳಿಕೆ ನೀಡಿ, ಅದನ್ನು ಸಮರ್ಥಿಸಿಕೊಳ್ಳುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಪಾಲಿಗೆ ಬಿಸಿ ತುಪ್ಪವಾಗಿದ್ದಾರೆ. ತಾವು ನೀಡಿದ್ದ ಹೇಳಿಕೆಯಲ್ಲಿ ತಪ್ಪಿಲ್ಲ, ಒಂದು ವೇಳೆ ತಪ್ಪು ಎಂದು ಸಾಬೀತು ಪಡಿಸಿ ನಾನು ಕ್ಷಮೆ ಕೇಳುವುದಷ್ಟೆ ಅಲ್ಲ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಸಾಬೀತು ಪಡಿಸಲಾಗದಿದ್ದರೆ ನನ್ನ ವಿರುದ್ಧ ಮಾತನಾಡುವವರು ರಾಜೀನಾಮೆ ನೀಡುತ್ತಾರೆಯೇ ಎಂದು ಸತೀಶ್ ಪ್ರತಿ ಸವಾಲು ಹಾಕಿದ್ದಾರೆ. ಸತೀಶ್ ಜಾರಕಿಹೊಳಿ ಅವರು ತಿರುಗಿ ಬೀಳುವವರೆಗೂ ಬಿಜೆಪಿಯ ಎಲ್ಲಾ ನಾಯಕರು ವಿವಾದಿತ ಹೇಳಿಕೆಗಾಗಿ […]

ಸತೀಶ್ ಜಾರಕಿಹೊಳಿ ತಕ್ಷಣ ಕ್ಷಮೆ ಕೇಳಬೇಕು : ಬಿಎಸ್‌ವೈ

ಬೆಂಗಳೂರು,ನ.9- ಹಿಂದೂ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಕ್ಷಣವೇ ಕ್ಷಮಾಪಣೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿದ ಮಾತನ್ನೂ ಯಾರೊಬ್ಬರು ಒಪ್ಪಲು ಸಾಧ್ಯವಿಲ್ಲ. ಸ್ವತಃ ಅವರ ಪಕ್ಷದವರೇ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ಹೇಳಿದ್ದನ್ನು ಮತ್ತೆ ಸಮರ್ಥಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಸತೀಶ್ ಜಾರಕಿಹೊಳಿ ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು. ಒಂದು ವೇಳೆ ತಾವು ಹೇಳಿದ್ದೇ ಸರಿ ಎನ್ನುವುದಾದರೆ ಕೆಪಿಸಿಸಿಯವರು ಅವರ ಮೇಲೆ […]

ಸತೀಶ್ ಜಾರಕಿಹೊಳಿ ಹೇಳಿಕೆಗೆ ಗೃಹ ಸಚಿವರು ಕಿಡಿ

ಬೆಂಗಳೂರು,ನ.8- ಕಾಂಗ್ರೆಸ್ ನಾಯಕರಿಗೆ ಹಿಂದೂ ಪದವೆಂದರೆ ಅಶ್ಲೀಲ ಹಾಗೂ ಅದೇ ರೀತಿಯಲ್ಲಿ ಕೇಸರಿ ಎಂದರೆ ಅಲರ್ಜಿ. ಈ ನಿಲುವು ಆ ಪಕ್ಷದ ಸಿದ್ದಾಂತದ ಒಂದು ಅವಿಭಾಜ್ಯ ಅಂಗವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದರು. ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನ.11ರಂದು ನಡೆಯಲಿರುವ ಸಾರ್ವಜನಿಕ ಸಮಾವೇಶದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ನಾಯಕ ಸತೀಶ್ ಜಾರಕಹೊಳಿ ಅವರು ಹಿಂದೂ ಪದದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಪ್ರಶ್ನೆಗೆ […]

ಸತೀಶ್ ಜಾರಕಿಹೊಳಿ ಹೇಳಿಕೆಗೆ ಕೈನಲ್ಲಿ ಆಕ್ರೋಶ

ಬೆಂಗಳೂರು,ನ.8- ಚುನಾವಣೆ ಹೊಸ್ತಿಲಿನಲ್ಲಿ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಕಾಂಗ್ರೆಸ್ ಪಾಲಿಗೆ ದುಬಾರಿಯಾಗಿದ್ದು, ಪಕ್ಷದ ಆಂತರಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸತೀಶ್ ಜಾರಕಿಹೊಳಿಯವರು ಪ್ರಗತಿಪರ ಚಿಂತನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರತಿ ಹೇಳಿಕೆ ಮತ್ತು ನಡೆವಳಿಕೆಗಳಲ್ಲೂ ಜಾಗೃತಿ ವಹಿಸಬೇಕಾದ ಕಡೆ ನಿರ್ಲಕ್ಷ್ಯವಹಿಸಿ ಪಕ್ಷಕ್ಕೆ ಹಾನಿ ಮಾಡಿದ್ದಾರೆ ಎಂಬ ಆಕ್ಷೇಪಗಳು ಕೇಳಿಬಂದಿವೆ. ಕಾಂಗ್ರೆಸ್ ಒಟ್ಟಾರೆಯಾಗಿ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪಕ್ಷಕ್ಕೆ ಚೈತನ್ಯ ನೀಡುವ ಹೊತ್ತಿನಲ್ಲಿ ಸತೀಶ್ ಜಾರಕಿಹೊಳಿ ಹೇಳಿಕೆ ಮುಜುಗರ ತಂದಿದೆ. ಸಣ್ಣಪುಟ್ಟ ವಿಷಯಗಳಲ್ಲಿ […]

ಸತೀಶ್ ಜಾರಕಿಹೊಳಿ ಹೇಳಿಕೆ ಪೂರ್ವ ಯೋಜಿತ ಮತ್ತು ವ್ಯವಸ್ಥಿತ: ಸಿಎಂ ಬೊಮ್ಮಾಯಿ

ಉಡುಪಿ.ನ.8-ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ನಾಯಕರ ಸಮ್ಮತಿ ಇದೆಯೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಧರ್ಮದ ಕುರಿತು ಮಾತನಾಡಿರುವ ಜಾರಕಿಹೊಳಿ ಕ್ಷಮೆ ಕೇಳುವ ಬದಲು ಸಮರ್ಥಿಸಿಕೊಂಡಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಳ್ಳುತ್ತಾರೆಯೇ ಇಲ್ಲವೇ ಖಂಡಿಸುತ್ತಾರೆಯೇ ಎಂದು ಪ್ರಶ್ನೆ ಹಾಕಿದರು. ಅರೆಮರೆ ಓದಿಕೊಂಡಿರುವ ಸತೀಶ್ ಜಾರಕಿಹೊಳಿ ಪ್ರಬುದ್ದನಂತೆ ಮಾತನಾಡುವುದನ್ನು ನಿಲ್ಲಿಸಬೇಕು. ಹಿಂದೂ ಧರ್ಮವನ್ನು ಟೀಕೆ ಮಾಡಿದರೆ ಅಲ್ಪಸಂಖ್ಯಾತರ ಮತಗಳು ಬರಬಹುದೆಂಬ […]

ಹಿಂದುತ್ವಕ್ಕೆ ಅಪಮಾನವಾದಾಗ ನಾ ಮೌನಿಯಾಗಲಾರೆ: ಸಚಿವ ಸುನಿಲ್ ಕುಮಾರ್

ಬೆಂಗಳೂರು,ನ.8- ಹಿಂದು ಶಬ್ದದ ಅರ್ಥ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ವಿರುದ್ಧ ಕೇಸರಿಪಡೆ ಕೆರಳಿದ್ದು, ಸ್ವಾಭಿಮಾನಿ ಹಿಂದು ಎಂಬ ಘೋಷವಾಕ್ಯದೊಂದಿಗೆ ಇಂಧನ ಹಾಗೂ ಕನ್ನಡ- ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ಅಭಿಯಾನ ಪ್ರಾರಂಭಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು […]