ರಾಹುಲ್ ಕನಸಿನಲ್ಲೂ ಸಾವರ್ಕರ್ ಆಗಲು ಸಾಧ್ಯವಿಲ್ಲ : ಅನುರಾಗ್ ಠಾಕೂರ್

ನವದೆಹಲಿ, ಮಾ .27 :ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಲವಾದ ಸಂಕಲ್ಪ ಮತ್ತು ದೇಶದ ಬಗ್ಗೆ ಪ್ರೀತಿಯ ಅಗತ್ಯವಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ. ಸಾವಕರ್ರ್ ಅವರು ಬ್ರಿಟಿಷ್ ವಸಾಹತುಶಾಹಿಗಳ ಮುಂದೆ ಕ್ಷಮಾಪಣೆ ಯಾಚನೆ ಬಗ್ಗೆ ಮತ್ತು ಬಿಜೆಪಿ ನೇತೃತ್ವದ ಸರ್ಕಾರವನ್ನು ಟೀಕಿಸಿದ್ದ ರಾಹುಲ್ ಗಾಂಧಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಆತ್ಮೀಯ ಶ್ರೀ ಗಾಂಧಿ, ನೀವು ಎಂದಿಗೂ ನಿಮ್ಮ ಉತ್ತಮ ಕನಸಿನಲ್ಲಿಯೂ ಸಹ ಸಾವಕರ್ರ್ ಆಗಲು ಸಾಧ್ಯವಿಲ್ಲ ಏಕೆಂದರೆ ಸಾವಕರ್ರ್ ಆಗಲು ಬಲವಾದ […]

ಸಾವರ್ಕರ್ ಬಗ್ಗೆ ಕೀಳಾಗಿ ಮಾತನಾಡಿದರೆ ಮೈತ್ರಿ ಮುರಿದುಕೊಳ್ಳುತ್ತೆವೆ ಹುಷಾರ್..!

ಮಾಲೆಗಾಂವ್,ಮಾ.27- ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ಸಾವರ್ಕರ್ ಅವರ ಬಗ್ಗೆ ಕೀಳಾಗಿ ಮಾತನಾಡಿದರೆ ಮೈತ್ರಿ ಕಡಿದುಕೊಳ್ಳಬೇಕಾಗುತ್ತದೆ ಎಂದು ಉದ್ಧವ್ ಠಾಕ್ರೆ ಅವರು ರಾಹುಲ್‍ಗಾಂಧಿ ಅವರಿಗೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ನಾನು ಕ್ಷಮೆ ಕೇಳಲು ಸಾವರ್ಕರ್ ಅಲ್ಲ, ನಾನು ಗಾಂಧಿ ಎಂದು ಗುಡುಗಿದ್ದ ರಾಹುಲ್‍ಗಾಂಧಿ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಶಿವಸೇನೆ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್‍ಠಾಕ್ರೆ ಅವರು ಸಾವರ್ಕರ್ ಅವರನ್ನು ನಾವು ಆರಾಧ್ಯ ದೈವ ಎಂದು ಪರಿಗಣಿಸುತ್ತೇವೆ ಅಂತಹ ಮಹಾನ್ ವ್ಯಕ್ತಿಯ ಬಗ್ಗೆ ಕೀಳಾಗಿ ಮಾತನಾಡುವುದನ್ನು ನಾವು […]

ಸಾರ್ವಕರ್ ಫೋಟೋ ಏಕೆ..? ನಮ್ಮ ರಾಜ್ಯದ ಮಹನೀಯರಿಲ್ಲವೆ..? : ಎಂ.ಬಿ.ಪಾಟೀಲ್

ಬೆಂಗಳೂರು,ಆ.24- ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ನಮ್ಮ ರಾಜ್ಯದ ನಾಯಕರು ಹಾಗೂ ದಾರ್ಶನಿಕರ ಫೋಟೋ ಇಟ್ಟು ಗಣಪತಿ ಪೂಜೆ ಮಾಡಿ, ಅದರ ಬದಲು ಸಾರ್ವಕರ್ ಫೋಟೋ ಏಕೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಕರ್ ಯಾಕೆ ನಮ್ಮಲ್ಲಿ ಹಲವು ಮಹನೀಯರು ಇಲ್ಲವೇ? ಸಾರ್ವಕರ್ ಬದಲಾಗಿ ಕಿತ್ತೂರು ಚೆನ್ನಮ್ಮನವರ ಫೋಟೊ ಹಾಕಿ, ಬಸವಣ್ಣ, ಸಂಗೊಳ್ಳಿ ರಾಯಣ್ಣ, ಸುರಪುರದ ನಾಯಕರು, ಕೆಂಪೇಗೌಡರ ಫೋಟೊ ಇಟ್ಟು ಪೂಜೆ ಮಾಡಿ ಎಂದು ಸಲಹೆ ನೀಡಿದರು. ನಾನು […]

ತಾರಕಕ್ಕೇರಿದ ಮೊಟ್ಟೆ v/s ಸಾವರ್ಕರ್ ವಿವಾದ

ಬೆಂಗಳೂರು,ಆ.20- ರಾಜ್ಯ ರಾಜಕಾರಣದಲ್ಲಿ ಇದೀಗ ಮೊಟ್ಟೆ V/S ವೀರ ಸಾರ್ವಕರ್ ಭಾವಚಿತ್ರ ಸುಟ್ಟು ಹಾಕಿದ ವಿವಾದ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ಸಂಘರ್ಷ ತಾರಕಕ್ಕೇರಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಎಸೆದ ಮೊಟ್ಟೆ ಪ್ರಕರಣ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಬಿಜೆಪಿ ವಿರುದ್ಧ ಪ್ರತಿಭಟನೆ ಮುಂದುವರೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಕೂಡ ಸ್ವಾತಂತ್ರ್ಯ ಹೋರಾಟಗಾರ ವೀರಸಾರ್ವಕರ್ ಭಾವಚಿತ್ರವನ್ನು ಸುಟ್ಟು ಹಾಕಿದ್ದಕ್ಕೆ ಆಕ್ರೋಶಗೊಂಡ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದ್ದಾರೆ. […]

ಸಹಜ ಸ್ಥಿತಿಯತ್ತ ಮರಳಿದೆ ಶಿವಮೊಗ್ಗ, ಶಾಲಾ-ಕಾಲೇಜುಗಳು ಆರಂಭ

ಶಿವಮೊಗ್ಗ,ಆ.17- ಎರಡು ದಿನಗಳಲ್ಲಿ ನಗರ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ತಿಳಿಸಿದರು. ಕಳೆದ ಎರಡು ದಿನಗಳ ಹಿಂದೆ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಸಂಬಂಧ ಅಲೋಕ್‍ಕುಮಾರ್ ಅವರು ಸ್ಥಳದಲ್ಲೇ ಬೀಡು ಬಿಟ್ಟು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಇಂದು ಬೆಳಗ್ಗೆ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಶಿವಮೊಗ್ಗ ನಗರ ಎರಡು ದಿನದಲ್ಲಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಇಂದು […]

ಶಿವಮೊಗ್ಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ : ಸಿಎಂ ಬೊಮ್ಮಾಯಿ

ಬೆಂಗಳೂರು,ಆ.16- ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಚುರುಕಾಗಿ ತನಿಖೆ ನಡೆಸಿ ವರದಿ ನೀಡಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದರಿಂದಲೆ ಘಟನೆ ನಡೆದು ಒಂದು ದಿನದೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಗೆ ಕಾರಣ ಏನು? ಈ ಕೃತ್ಯದಲ್ಲಿ ಯಾರಿದ್ದಾರೆ? ಎಂಬುದರ ಕುರಿತು ಶೀಘ್ರ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ ಎಂದು ತಿಳಿಸಿದರು. ನಿಷ್ಪಕ್ಷಪಾತವಾಗಿ ತನಿಖೆ […]