ಬ್ರಹ್ಮಗಿರಿ ಬೆಟ್ಟದಲ್ಲಿ ಟ್ರಕ್ಕಿಂಗ್ ಹೋಗಿ ಪ್ರಪಾತಕ್ಕೆ ಬಿದ್ದಿದ್ದ ಯುವಕನನ್ನು ರಕ್ಷಿಸಿದ NDRF

ಚಿಕ್ಕಬಳ್ಳಾಪುರ, ಫೆ.21- ತಾಲ್ಲೂಕಿನ ಐತಿಹಾಸಿಕ ಪ್ರವಾಸಿತಾಣ ನಂದಿಬೆಟ್ಟದಲ್ಲಿ ಟ್ರಕ್ಕಿಂಗ್ ಮಾಡುವಾಗ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಯುವಕನನ್ನು ಜಿಲ್ಲಾ ಪೊಲೀಸ್ ಇಲಾಖೆ, ಅಗ್ನಿಶಾಮಕದಳ, ಎನ್‍ಡಿಆರ್‍ಎಫ್ ಹರಸಾಹಸಪಟ್ಟು ಕಾಪ್ಟರ್ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ದೆಹಲಿ ಮೂಲದ ವಿದ್ಯಾರ್ಥಿ ನಿಶಾಂಕ್ ಎಂಬಾತನೇ ಟ್ರಕ್ಕಿಂಗ್ ಮಾಡಲು ಹೋಗಿ ಪ್ರಪಾತಕ್ಕೆ ಬಿದ್ದು ನರಕಯಾತನೆ ಅನುಭವಿಸಿದ ಯುವಕ. ಯುವಕ ನಿಶಾಂಕ್ ಬೆಂಗಳೂರಿನ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ವ್ಯಾಸಂಗ ಮಾಡುತ್ತಿದ್ದು, ಈತ ಮೂಲತಃ ದೆಹಲಿಯವರು ಎಂದು ತಿಳಿದು ಬಂದಿದೆ. ಕೋವಿಡ್ […]