ಎಲ್ಲ ಅಡೆತಡೆಗಳನ್ನು ಮೀರಿ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ ಭಾರತ : ಪ್ರಧಾನಿ

ನವದೆಹಲಿ.ಫೆ.8- ಎಲ್ಲ ಅಡೆತಡೆಗಳನ್ನು ಮೀರಿ ಭಾರತ ಅಭಿವೃದ್ಧಿಯ ಪಥದಲ್ಲಿ ಮುನ್ನುಗ್ಗುತ್ತಿದೆ 21ನೇ ಶತಮಾನ ಭಾರತದ್ದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಘರ್ಜನೆಯನ್ನು ಇಡೀ ವಿಶ್ವ ಕೇಳಿಸಿಕೊಳ್ಳುತ್ತಿದೆ ,ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡಿರುವಾಗ ಮುಂದಿನ 25 ವರ್ಷಗಳಲ್ಲಿ ದೇಶವನ್ನು ಹೇಗೆ ಪ್ರಗತಿಯತ್ತ ಕೊಂಡೊಯ್ಯಬೇಕು ಎಂಬುದರತ್ತ ಎಲ್ಲರೂ ಗಮನಹರಿಸಬೇಕು ಎಂದು ಹೇಳಿದರು. ಕಾಂಗ್ರೆಸ್ ಅಕಾರದ ವೇಳೆ ದೇಶದ ಅಭಿವೃದ್ಧಿಗೆ ಅವಕಾಶ ನೀಡಲಿಲ್ಲ. […]