ಉಕ್ರೇನ್‍ನಲ್ಲಿ ಓದುತ್ತಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

ನವದೆಹಲಿ,ಮಾ.3- ಉಕ್ರೇನ್‍ಗೆ ವಿದ್ಯಾಭ್ಯಾಸಕ್ಕೆ ತೆರಳಿ ಅರ್ಧಕ್ಕೆ ಮೊಟಕುಗೊಳಿಸಿ ವಾಪಸ್ ಬರುತ್ತಿರುವ ಭಾರತೀಯ ವಿದ್ಯಾರ್ಥಿಗಳಲ್ಲಿನ ಭವಿಷ್ಯದ ಗೊಂದಲಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಯುದ್ಧಪೀಡಿತ ಉಕ್ರೇನ್‍ನಲ್ಲಿ ಉಳಿಯಲಾಗದೆ ಭಾರತೀಯ ವಿದ್ಯಾರ್ಥಿಗಳು ಆಪರೇಷನ್ ಗಂಗಾಕಾರ್ಯಾಚರಣೆ ಮೂಲಕ ಭಾರತಕ್ಕೆ ಮರಳುತ್ತಿದ್ದಾರೆ. ಆದರೆ, ಇವರಲ್ಲಿ ಭವಿಷ್ಯದ ಆತಂಕ ತೀವ್ರವಾಗಿ ಕಾಡಲಾರಂಭಿಸಿದೆ. ಲಕ್ಷಾಂತರ ಹಣ ಕೊಟ್ಟು ಎಂಬಿಬಿಎಸ್ ಹಾಗೂ ಇತರೆ ಶಿಕ್ಷಣ ಪಡೆಯಲು ಉಕ್ರೇನ್‍ಗೆ ತೆರಳಿದ್ದರು. ಅನಿರೀಕ್ಷಿತವಾಗಿ ಎದುರಾದ ಯುದ್ಧದಿಂದ ದೇಶ ತೊರೆಯಬೇಕಾದ ಅನಿವಾರ್ಯತೆ ಎದುರಾಗಿದೆ. ಇತ್ತ ವಿದ್ಯಾಭ್ಯಾಸವೂ ಪೂರ್ಣಗೊಂಡಿಲ್ಲ. […]