ಮೀಸಲಾತಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ, ಪ್ರತಿಭಟನೆ ಕೈಬಿಟ್ಟ ಪ್ರಸನ್ನಾನಂದ ಸ್ವಾಮೀಜಿ

ಬೆಂಗಳೂರು,ಅ.24-ಪರಿಶಿಷ್ಟ ಜಾತಿ , ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಿಸುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುತ್ತಿದ್ದಂತೆ ವಾಲ್ಮೀಕಿ ಪೀಠದ ಸ್ವಾಮೀಜಿ ತಮ್ಮ ನಿರಶನವನ್ನು ಕೊನೆಗೂ ಹಿಂತೆಗೆದುಕೊಂಡಿದ್ದಾರೆ. ಕಳೆದ 220ಕ್ಕೂ ಹೆಚ್ಚು ದಿನಗಳಿಂದ ಪರಿಶಿಷ್ಟ ವರ್ಗಗಳಿಗೆ ಮೀಸಲಾತಿ ಹೆಚ್ಚಿಸಬೇಕೆಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ವಾಲ್ಮೀಕಿ ಪೀಠದ ಪೀಠಾಧ್ಯಕ್ಷರಾಗಿರುವ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು. ಕಾರ್ಗಿಲ್‍ನಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ ಇದೀಗ ಸರ್ಕಾರ ಎಸ್ಸಿಗೆ ಶೇ.15ರಿಂದ 17 ಹಾಗೂ ಪರಿಶಿಷ್ಟ ವರ್ಗಕ್ಕೆ ಶೇ.3ರಿಂದ 7ರಷ್ಟು ಮೀಸಲಾತಿ […]

ಪ.ಜಾ ಹಾಗೂ ಪ.ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿ ಸುಗ್ರೀವಾಜ್ಞೆ ಜಾರಿ

ಬೆಂಗಳೂರು,ಅ.20- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದಕ್ಕೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದರಿಂದ ಸರ್ಕಾರದ ಈ ತೀರ್ಮಾನದಿಂದ ಇನ್ನು ಮುಂದೆ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ ಶೇ.15ರಿಂದ 17 ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಶೇ.3ರಿಂದ 7ಕ್ಕೆ ಹೆಚ್ಚಳವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ […]

BGI NEWS : SC,ST ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಘೋಷಣೆ

ಬೆಂಗಳೂರು,ಜು.28- ರಾಜ್ಯದ 3.78 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ರಾಜ್ಯ ಸರ್ಕಾರದ ವಿನೂತನ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಉದ್ಘಾಟಿಸಲಿದ್ದಾರೆ. ರಾಜ್ಯದ ಎಲ್ಲಾ ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಿಪಿಎಲ್ ಕಾರ್ಡ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆ ಇದಾಗಿದೆ.ಯೋಜನೆ ಕುರಿತು ರಾಜ್ಯದ ಎಲ್ಲಾ ಎಸ್ಕಾಂಗಳು ಎಸ್ ಸಿ-ಎಸ್ […]