ಅಭ್ಯರ್ಥಿಗಳ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಸಮ್ಮತಿ

ಹೊಸದಿಲ್ಲಿ,ಜ.18- ಚುನಾವಣೆಯಲ್ಲಿ ಸ್ರ್ಪಧಿಸುವ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಸಾರ್ವಜನಿಕವಾಗಿ ಪ್ರಕಟಿಸದ ರಾಜಕೀಯ ಪಕ್ಷಗಳ ನೋಂದಣಿಯನ್ನು ರದ್ದುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸು ವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಈ ಮೂಲಕ ಎಲ್ಲಾ ರಾಜಕೀಯ ಪಕ್ಷಗಳಿಗೆ ಧರ್ಮ ಸಂಕಟ ಎದುರಾಗಿದೆ. ಜೊತೆಯಲ್ಲಿ ಸ್ವಚ್ಚ ರಾಜಕಾರಣದ ನಿರೀಕ್ಷೆಯಲ್ಲಿದ್ದವರಿಗೆ ಮಿಣುಕು ದೀಪದ ಬೆಳಕೊಂದು ಕಾಣಸಿಗುವಂತಾಗಿದೆ. ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಹಿರಿಯ ವಕೀಲ ಅಶ್ವಿನ್ ಕುಮಾರ್ ದುಬೆ ಅವರ ಮೂಲಕ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿ […]