ಎಸ್‍ಸಿ ಒಳ ಮೀಸಲಾತಿ ಕಲ್ಪಿಸಲು ಮುಂದಾದ ಸರ್ಕಾರ

ಬೆಂಗಳೂರು, ಜ.2- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಒಕ್ಕಲಿಗರು, ಲಿಂಗಾಯತರ ಮೀಸಲಾತಿ ಬೇಡಿಕೆ ಈಡೇರಿಸುವ ಮೂಲಕ ಬೊಮ್ಮಾಯಿ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇದೀಗ ಪರಿಶಿಷ್ಟ ಜಾತಿಯವರ ಬಹುಕಾಲದ ಬೇಡಿಕೆಯಾದ ಒಳ ಮೀಸಲಾತಿ ಕಲ್ಪಿಸಲು ಮುಂದಾಗಿದೆ. ಆ ಮೂಲಕ ಬೊಮ್ಮಾಯಿ ಸರ್ಕಾರ ಚುನಾವಣಾ ದಿಗ್ವಿಜಯಕ್ಕಾಗಿ ಕಾರ್ಯತಂತ್ರ ರೂಪಿಸಿದೆ. ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡಲು ಈಗಾಗಲೇ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಲಾಗಿದ್ದು, ಸಂಪುಟ ಉಪಸಮಿತಿ ವರದಿ ಆಧಾರದಲ್ಲಿ […]

ಎಸ್‍ಸಿ/ಎಸ್‍ಟಿ ಮೀಸಲಾತಿ ಹೆಚ್ಚಳ ಕೇಂದ್ರಕ್ಕೆ ಶಿಫಾರಸ್ಸು

ಬೆಳಗಾವಿ,ಡಿ.21- ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಮೀಸಲಾತಿ ಹೆಚ್ಚಿಸುವ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು(ನೇಮಕಾತಿ ಅಥವಾ ಹುದ್ದೆಯಲ್ಲಿ ಮೀಸಲಾತಿ 2022) ವಿಧೇಯಕವನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ತೀರ್ಮಾನವನ್ನು ತೆಗೆದುಕೊಂಡಿದೆ. ಈಗಾಗಲೇ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ಉಭಯ ಸದನಗಳಲ್ಲಿ ಚರ್ಚೆಯಾದ ನಂತರ ರಾಜ್ಯ ಸರ್ಕಾರ ವಿಧೇಯಕವನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲಿದೆ. ನಾಳೆ ವಿಧೇಯಕದ ಕುರಿತು ವಿಧಾನಸಭೆ ಮತ್ತು ವಿಧಾನಪರಿಷತ್‍ನಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಚರ್ಚೆ ನಡೆಸಲಿದ್ದಾರೆ. […]

SC,ST ಸಮುದಾಯದ ಭೂ ಪರಿವರ್ತನೆ ಅಧಿಕಾರ ಜಿಲ್ಲಾಧಿಕಾರಿಗೆ

ಬೆಂಗಳೂರು, ನ.6- ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಂಜೂರಾದ ಜಮೀನಿನ ನಾಲ್ಕು ಗುಂಟೆಯಲ್ಲಿ ಸ್ವಂತ ವಾಸದ ಮನೆ ನಿರ್ಮಿಸುವ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಎಸ್ಸಿ ,ಎಸ್ಟಿ ಸಮುದಾಯದವರಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ ಇಲವೆ 4 ಗುಂಟೆಯಲ್ಲಿಸ್ವಂತ ವಾಸದ ಮನೆ ನಿರ್ಮಿಸುವ ಉದ್ದೇಶಕ್ಕಾಗಿ ಸಲ್ಲಿಸಿದ ಅರ್ಜಿಯನ್ನು ನಿಯಮಾನುಸಾರ ಪರಿಶೀಲಿಸಿ ಜಿಲ್ಲಾಧಿಕಾರಿಯ ಹಂತದಲ್ಲಿಯೇ ಭೂ ಪರಿವರ್ತನೆ ಆದೇಶ ಹೊರಡಿಸಲು ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ, ಸ್ವಂತ ವಾಸದ […]

ರಾಹುಲ್ ಆರೋಪಕ್ಕೆ ಶ್ರೀರಾಮುಲು ತಿರುಗೇಟು

ಬೆಂಗಳೂರು, ಅ.11- ಬಿಜೆಪಿ ದಲಿತರ ಹಾಗೂ ಪರಿಶಿಷ್ಟ ವರ್ಗಗಳ ವಿರೋಧಿ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಭಾರತ್ ಜೋಡೋ ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಯವರೇ ಬಿಜೆಪಿ ದಲಿತರ ವಿರೋಧಿ ಎಂದು ಯಾವ ಬಾಯಲ್ಲಿ ಹೇಳಿದರೋ ಅಥವಾ ಯಾರಾದರೂ ಹೇಳುವಂತೆ ನಿಮಗೆ ಬಲವಂತ ಮಾಡಿದರೋ ಗೊತ್ತಿಲ್ಲ. ಆದರೆ ನಿಮ್ಮ ಹೇಳಿಕೆಗೆ ನನ್ನ ಕನಿಕರವಿದೆ ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಮೊದಲ […]