ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಭದ್ರಾ ಮೇಲ್ದಂಡೆ : ಬೊಮ್ಮಾಯಿ

ಹೊಸದುರ್ಗ,ಅ.22- ಭದ್ರಾ ಮೇಲ್ದಂಡೆ ಯೋಜನೆ ಯನ್ನು ರಾಷ್ಟ್ರೀಯ ಪ್ರಾಮುಖ್ಯ ಯೋಜನೆ ಯಾಗಿ ಪಿಐಬಿ (ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ) ಯಲ್ಲಿ ಅನುಮೋದನೆ ನೀಡಲಾಗಿದ್ದು, ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಬಾಕಿ ಇದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಜಲಸಂಪನ್ಮೂಲ ಸಚಿವರು ಯೋಜನೆ ಕುರಿತು ಕಾರ್ಯೋ ನ್ಮುಖರಾಗಿದ್ದಾರೆ. ವೈಯಕ್ತಿಕ ವಾಗಿ ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮಾತುಕತೆ […]

ಅ.2ರಿಂದ ಯಶಸ್ವಿನಿ ಯೋಜನೆ ಜಾರಿ

ಬೆಂಗಳೂರು, ಸೆ.13- ಸಹಕಾರ ಕ್ಷೇತ್ರಗಳಲ್ಲಿರುವವರಿಗೆ ಚಿಕಿತ್ಸೆ ನೀಡುವ ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2ರಿಂದ ಜಾರಿ ಮಾಡಲು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಅದರಂತೆ ಅನುಷ್ಠಾನಕ್ಕೆ ಬರಲಿದೆ ಎಂದು ಸಹಕಾರ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್‍ನ ಪ್ರಕಾಶ್ ರಾಥೋಡ್ ಪ್ರಶ್ನೆಗೆ ಉತ್ತರಿಸಿದ ಅವರು, ಈ ಮೊದಲು 2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಸಹಕಾರ ಸಚಿವ ಎಚ್.ವಿಶ್ವನಾಥ್ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದರು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಈ ಯೋಜನೆ ಒಪ್ಪಿಗೆ ಇರಲಿಲ್ಲ. ಹಾಗಾಗಿ 2018ರಲ್ಲಿ ಸ್ಥಗಿತಗೊಳಿಸಿದರು.ಬದಲಿಗೆ ಆಯುಷ್ಮಾನ್ […]

ಮೇಕೆದಾಟು ಯೋಜನೆ, ಆ.10ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ನವದೆಹಲಿ,ಜು.26- ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದೆ.ವಿಸ್ತೃತ ಯೋಜನಾ ವರದಿ(ಡಿಪಿಆರ್) ಕುರಿತಾಗಿ ಕಾವೇರಿ ಜಲ ನಿರ್ವಹಣಾ ಪ್ರಾಕಾರದಲ್ಲಿ ಯಾವುದೇ ರೀತಿಯ ಚರ್ಚೆ ನಡೆಸಬಾರದು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿತು. ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಸಿದಂತೆ ಕರ್ನಾಟಕ ಸರ್ಕಾರದ ಡಿಪಿಆರ್ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸದಂತೆ ನಿರ್ದೇಶನ ನೀಡಬೇಕೆಂಬ ತಮಿಳುನಾಡು ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್ ಮನ್ನಿಸಿ ಮುಂದಿನ ಅರ್ಜಿ ವಿಚಾರಣೆಯನ್ನು ಆ.10ಕ್ಕೆ ಮುಂದೂಡಿತು. […]

ಅಗ್ನಿವೀರರಿಗೆ ಧೈರ್ಯ ತುಂಬಿದ ಎಸ್‍ಪಿ

ಕೋಲಾರ, ಜು.21- ಸೈನ್ಯಕ್ಕೆ ಸೇರಲು ಬಯಸಿದ ಅಗ್ನಿವೀರರಿಗೆ ತರಬೇತಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ದೇವರಾಜ್ ಭೇಟಿ ನೀಡಿ ಸೂರ್ತಿ ತುಂಬಿದರು. ನಗರದ ರೈಲ್ವೆ ನಿಲ್ದಾಣ ಸಮೀಪದ ಮೈದಾನದಲ್ಲಿ ಕೋಲಾರ ಸೋರ್ಟ್ ಕ್ಲಬ್ ವತಿಯಿಂದ ಅಗ್ನಿವೀರರಿಗೆ 20 ದಿನಗಳಿಂದ ಉಚಿತ ತರಬೇತಿ ನೀಡಲಾಗುತ್ತಿದ್ದು, ಇಂದು ಬೆಳಗ್ಗೆ ಎಸ್‍ಪಿ ದೇವರಾಜ್ ಅವರು ಭೇಟಿ ನೀಡಿ ಕವಾಯತುಗಳನ್ನು ವೀಕ್ಷಿಸಿದ ನಂತರ ಅಗ್ನಿವೀರರಿಗೆ ಸೂರ್ತಿ ತುಂಬಿ ಧೈರ್ಯದ ಸಲಹೆಗಳನ್ನು ನೀಡಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಅಗ್ನಿವೀರರಿಗೆ ನಿವೃತ್ತ ಸೈನಿಕರಾದ ಸುರೇಶ್, ಕೃಷ್ಣಮೂರ್ತಿ […]