ಶಾಲಾ-ಕಾಲೇಜು ಆವರಣದಲ್ಲಿ ಹಿಜಾಬ್-ಕೇಸರಿ ಶಾಲು ಧರಿಸುವುದು ತಪ್ಪು : ಸಚಿವ ಅಶೋಕ್

ಬೆಂಗಳೂರು, ಫೆ.9- ಶಾಲಾ-ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ಎರಡೂ ಧರಿಸುವುದು ತಪ್ಪು. ಹಾಗೆಯೇ ರಾಷ್ಟ್ರಧ್ವಜ ಇಳಿಸುವುದು, ಖಾಲಿ ಕಂಬದಲ್ಲಿ ಕೇಸರಿ ಧ್ವಜ ಹಾರಿಸುವುದು ಕೂಡ ತಪ್ಪು. ಇದನ್ನು ಯಾರೂ ಕೂಡ ಒಪ್ಪುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಹಿಜಾಬ್ ವಿಚಾರವಾಗಿ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಶಾಲಾ-ಕಾಲೇಜು ಆವರಣದಲ್ಲಿ ನಿಗದಿತ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದರು. ಇದರ ಹಿಂದೆ ಕಾಂಗ್ರೆಸ್ ಷಡ್ಯಂತ್ರ ಇದೆ. ಕಾಂಗ್ರೆಸ್‍ನಲ್ಲಿ ಎರಡು ವರ್ಗವಿದ್ದು, ಒಂದು ವರ್ಗ […]