ಮಕ್ಕಳ ಶಿಕ್ಷಣಕ್ಕೆ ಕೊಳ್ಳಿ ಇಟ್ಟ ಕೊರೊನಾ..!

ಬೆಂಗಳೂರು,ಫೆ.3-ಮಹಾಮಾರಿ ಕೊರೊನಾ ಕೇವಲ ಜನರ ಬದುಕಿನ ಜತೆ ಚೆಲ್ಲಾಟವಾಡಿಲ್ಲ. ಬದಲಿಗೆ ಶಾಲಾ ಮಕ್ಕಳ ಶಿಕ್ಷಣದ ಮೇಲೂ ಬರೆ ಎಳೆದಿದೆ. ಪ್ರಸಕ್ತ ಸಾಲಿನಲ್ಲಿ ಕೊರೊನಾ ನಂತರ ಶಾಲೆಯಿಂದ ಹೊರಗುಳಿದಿದ್ದ ಸಾವಿರಾರು ಮಕ್ಕಳಲ್ಲಿ ಅರ್ಧದಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ವಾಪಸ್ಸಾಗಿಲ್ಲ. 2021-22ನೇ ಸಾಲಿನಲ್ಲಿ 34,411 ಮಕ್ಕಳು ಶಾಲೆಗಳಿಂದ ಹೊರಗುಳಿದಿದ್ದರು. ಇವರಲ್ಲಿ 15,552 ಮಕ್ಕಳು ಮಾತ್ರ ಶಾಲೆಗಳಿಗೆ ಮರಳಿದ್ದು, ಉಳಿದ ಮಕ್ಕಳು ಇದುವರೆಗೂ ಶಾಲೆಗಳತ್ತ ಮುಖ ಮಾಡಿಲ್ಲ. ಹೀಗಾಗಿ ಶಾಲೆಗಳಿಂದ ಹೊರಗುಳಿದಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ ಮತ್ತೆ ಶಾಲೆಗಳಿಗೆ ಕರೆತರುವುದು ಶಿಕ್ಷಣ ಇಲಾಖೆಗೆ […]