ಬೆಂಗಳೂರಿನಲ್ಲೂ ಬಿಬಿಸಿ ವಿವಾದಾತ್ಮಕ ಸಾಕ್ಷ್ಯಚಿತ್ರದ ಪ್ರಸಾರ

ಬೆಂಗಳೂರು,ಜ.30- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ಸಿದ್ಧಪಡಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರದ ಪ್ರಸಾರದ ಮೇಲೆ ಕೇಂದ್ರ ಸರಕಾರ ನಿರ್ಬಂಧ ವಿಧಿಸಿದ್ದರೂ ಕೂಡ ಬೆಂಗಳೂರಿನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿರುವುದು ಕಂಡು ಬಂದಿದೆ. ಬೆಂಗಳೂರಿನ ಇನೆಂಟ್ರಿ ರಸ್ತೆಯಲ್ಲಿರುವ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್‍ಎ) ಕಚೇರಿಯಲ್ಲಿ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ – ಇಂಡಿಯಾ: ದಿ ಮೋದಿ ಕ್ವೆಶ್ಚನ್‍ನ್ನು ಪ್ರದರ್ಶಿಸಿರುವುದಾಗಿ ತಿಳಿದುಬಂದಿದೆ. ಎಐಎಸ್‍ಎ ಜ.25ರಂದು ವಿವಿಧ ಸಾಮಾಜಿಕ ಮಾಧ್ಯಮ ಫ್ಲಾಟಾಫಾರಮ್‍ಗಳಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸುತ್ತಿರುವುದಾಗಿ ಹೇಳಿ ಆಹ್ವಾನ ನೀಡಿತ್ತು, ಭಾರತೀಯ ಸಮಾಜದಲ್ಲಿ […]

ವಿವಿಗಳಲ್ಲಿ ಮೋದಿ ಕುರಿತ BBC ಸಾಕ್ಷ್ಯಚಿತ್ರ ಪ್ರದರ್ಶನ, ಹೆಚ್ಚಿದ ಸಂಘರ್ಷ

ನವದೆಹಲಿ, ಜ.25- ಪ್ರಧಾನಮಂತ್ರಿ ನರೇಂದ್ರ ಮೋದಿ ಕುರಿತ ವಿವಾದಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ದೇಶದ ಹಲವು ವಿಶ್ವವಿದ್ಯಾನಿಲಯಗಳಲ್ಲಿ ಪ್ರದರ್ಶಿಸುತ್ತಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ರಾತ್ರಿ ನವದೆಹಲಿಯ ಜವಾಹರ್‍ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕೆಲ ವಿದ್ಯಾರ್ಥಿಗಳು ಈ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಕಲ್ಲು ತೂರಾಟ ನಡೆದಿದೆ. ಇದರಿಂದ ಕೆಲಕಾಲ ವಿವಿ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಕೇರಳದ ವಿವಿಯೊಂದರಲ್ಲಿ ಪ್ರದರ್ಶನದ ವೇಳೆ ಕೆಲ ವಿದ್ಯಾರ್ಥಿಗಳ […]