80 ಮಂದಿ ವಶಕ್ಕೆ, ವಿಚಾರಣೆ ತೀವ್ರ : ಲೋಕ್‍ಕುಮಾರ್
ಬೆಂಗಳೂರು,ಸೆ.27- ಇಂದು ಮುಂಜಾನೆ 3 ಗಂಟೆಯಿಂದಲೇ ರಾಜ್ಯಾದ್ಯಂತ ಪೊಲೀಸರು, ಪಿಎಫ್‍ಐ ಪದಾಧಿಕಾರಿಗಳ ಮತ್ತು ಮುಖಂಡರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್‍ಕುಮಾರ್ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡುತ್ತಿದ್ದ ಅವರು, ಈತನಕ 80 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಜಿಲ್ಲೆಗಳಲ್ಲಿ ಎಸ್ಪಿಗಳು, ನಗರಗಳಲ್ಲಿ ಆಯುಕ್ತರುಗಳ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎಂದರು.ಎನ್‍ಐಎ ಮತ್ತು ಇನ್ನಿತರ ಕೇಂದ್ರದ ತನಿಖಾ ಏಜೆನ್ಸಿಗಳಿಂದ ಕೆಲವು ಮಾಹಿತಿಗಳನ್ನು […]
PFI,SDPI ಬೆಳೆಯಲು ಸಿದ್ದರಾಮಯ್ಯ ಕಾರಣ
ವಿಜಯಪುರ,ಸೆ.27- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳೆಯಲು ಕಾರಣವೇ ಸಿದ್ದರಾಮಯ್ಯ ಎಂದು ದೂರಿದ್ದಾರೆ. ಸಿದ್ದರಾಮಯ್ಯನವರ ಅಧಿಕಾರಾವಧಿಯಲ್ಲೆ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದೆ. ಅತಿ ಹೆಚ್ಚು […]
ಎಸ್‍ಡಿಪಿಐನಿಂದ ಕೋಮು ಗಲಭೆ ಸಂಚು : ಸಿಎಂ ಬೊಮ್ಮಾಯಿ
ಬೆಂಗಳೂರು,ಆ.23- ಸೂಕ್ಷ್ಮ ಪ್ರದೇಶವಾಗಿರುವ ಮಡಿಕೇರಿಯಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಶುಕ್ರವಾರ ಕೋಮುಗಲಭೆ ಸೃಷ್ಟಿಸುವ ಸಾಧ್ಯತೆ ಇರುವುದರಿಂದ ಇಲ್ಲಿ ಯಾವುದೇ ರೀತಿಯ ಸಭೆ, ಸಮಾರಂಭ ನಡೆಸಲು ಅವಕಾಶ ಕೊಡಬಾರದು ಎಂದುಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಶುಕ್ರವಾರ ಮಡಿಕೇರಿಯಲ್ಲಿ ರಾಜಕೀಯ ಸಮಾವೇಶಗಳನ್ನು ನಡೆಸಲು ಉದ್ದೇಶಿಸಿತ್ತು. ಜಿಲ್ಲಾಡಳಿತ ನಾಳೆ ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸಿದೆ. ಇದರ ಬೆನ್ನಲ್ಲೇ ಗುಪ್ತಚರ ವಿಭಾಗವು ಸಿಎಂ ಬೊಮ್ಮಾಯಿ ಅವರಿಗೆ ವರದಿಯೊಂದನ್ನು ನೀಡಿದ್ದು, ಸಾರ್ವಜನಿಕರ ಹಿತರಕ್ಷಣೆ ಹಾಗೂ ಕಾನೂನು […]
ರಾಜಕೀಯ ಲಾಭಕ್ಕಾಗಿ ಎಸ್‍ಡಿಪಿಐ ಪಕ್ಷವನ್ನು ಬಿಜೆಪಿ ಪೋಷಿಸುತ್ತಿದೆ : ರಾಮಲಿಂಗಾರೆಡ್ಡಿ
ಬೆಂಗಳೂರು,ಆ.16- ಎಸ್‍ಡಿಪಿಐ ಪಕ್ಷದಿಂದಾಗಿ ಕಾಂಗ್ರೆಸ್‍ನ ಮತಗಳು ವಿಭಜನೆಯಾಗುತ್ತವೆ ಎಂಬ ಕಾರಣಕ್ಕೆ ಬಿಜೆಪಿ ಅದನ್ನು ನಿಷೇಧ ಮಾಡಲು ಪ್ರಯತ್ನಿಸುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಪ್ರಚೋದನಾಕಾರಿ ಹೇಳಿಕೆಗಳಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ ಎಂದು ಆರೋಪಿಸಿದರು. ಸರ್ಕಾರ ಕಾನೂನು ಬಿಗಿ ಮಾಡಬೇಕು. ಗಲಭೆ ಪೀಡಿತ ಪ್ರದೇಶಗಳಿಗೆ ದಕ್ಷ ಅಧಿಕಾರಿಗಳನ್ನು ನಿಯೋಜನೆ ಮಾಡಿ ಅವರಿಗೆ ಪೂರ್ಣ ಪ್ರಮಾಣದ ಸ್ವಾತಂತ್ರ್ಯ ನೀಡಬೇಕು. ಆಗ ಮಾತ್ರ ಪರಿಸ್ಥಿತಿ ತಿಳಿಗೊಳ್ಳಲು ಕಾರಣ. […]
ಎಸ್‍ಡಿಪಿಐ, ಪಿಎಫ್‍ಐ ನಿಷೇಧ ಮಾಡಿ : ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲ್
ಬೆಂಗಳೂರು,ಆ.16- ಬಿಜೆಪಿಯವರು ಮಗುವನ್ನು ಚಿವುಟಿ, ತೊಟ್ಟಿಲನ್ನೂ ತೂಗುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಗಲಾಟೆಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದರು. ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಸಾಮರಸ್ಯ ಕದಡುತ್ತಿವೆ ಎಂಬ ಆರೋಪಗಳಿವೆ. ಸಾಕ್ಷ್ಯಗಳಿದ್ದರೆ ಕೂಡಲೇ ಆ ಸಂಘಟನೆಗಳನ್ನು ನಿಷೇಧ ಮಾಡಿ ಎಂದು ಸವಾಲು ಹಾಕಿದರು. ಗದ್ದಲಗಳಿಗೆ ಯಾರು ಕಾರಣ ಎಂಬುದು ಕಣ್ಣೇದುರೇ ಇದೆ. ಮೊದಲು ಬಿಜೆಪಿಯವರು ವೀರ ಸಾರ್ವಕರ್ ಫೋಟೋ ಹಾಕುತ್ತಾರೆ. ಹಾಕಿಕೊಳ್ಳಲಿ. […]
PFI-SDPI ನಿಷೇಧಕ್ಕೆ ಸರ್ಕಾರ ನಿರ್ಧಾರ..?
ಬೆಂಗಳೂರು,ಆ.1- ಸರಣಿ ಕಗ್ಗೊಲೆಯಿಂದಾಗಿ ಪಕ್ಷದ ವಿರುದ್ದವೇ ಕಾರ್ಯಕರ್ತರು ತಿರುಗಿಬಿದ್ದರಿವುದ ರಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಕೊನೆಗೂ ಪಿಎಫ್‍ಐ ಹಾಗೂ ಎಸ್‍ಡಿಪಿಐ ಸಂಘಟನೆಗಳನ್ನು ನಿಷೇಧಿಸುವ ದಿಟ್ಟ ನಿರ್ಧಾರಕ್ಕೆ ಮುಂದಾಗಿದೆ. ಡಿ.ಜೆ.ಹಳ್ಳಿ ಯಿಂದ ಹಿಡಿದು ಪುತ್ತೂರಿನಲ್ಲಿ ಬಿಜೆಪಿ ಯುವ ನಾಯಕ ಸಂತೋಷ್ ನಟ್ಟಾರ್ ಕೊಲೆ ಪ್ರಕರಣ ಸೇರಿದಂತೆ ಹಲವು ಗಲಭೆಗಳು ಮತ್ತು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿವೆ ಎಂಬ ಆರೋಪದ ಮೇಲೆ ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆಗಳನ್ನು ನಿಷೇಧಿಸುವ ವಿಷಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ. […]
ಪ್ರವೀಣ್ ಹತ್ಯೆಯಲ್ಲಿ SDPI,PFI ಭಾಗಿ ಶಂಕೆ..!?
ಬೆಂಗಳೂರು,ಜು.28- ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‍ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್‍ಐ ಮತ್ತು ಎಸ್‍ಡಿಪಿಐ ಮೇಲೆ ಅನುಮಾನವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ ಎಂದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಯಾರ ಬಗ್ಗೆಯೂ ಪ್ರತಿಕ್ರಿಯಿಸುವುದಿಲ್ಲ. ಈ ಕೃತ್ಯವನ್ನು ಯಾರು ಮಾಡಿದ್ದಾರೆ ನಿರ್ದಿಷ್ಟವಾಗಿ ಹೇಳಲಾಗುತ್ತಿಲ್ಲ. ಯಾರೇ ದುಷ್ಕøತ್ಯವೆಸಗಿದ್ದರೂ ಪೊಲೀಸರು ಪತ್ತೆಹಚ್ಚುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. […]
ಹಿಜಾಬ್ ವಿವಾದದ ಹಿಂದೆ ಬಿಜೆಪಿ-ಎಸ್‍ಡಿಪಿಐ ಕೈವಾಡ : ಡಿಕೆಶಿ ಆರೋಪ
ಬೆಂಗಳೂರು, ಫೆ.20- ಹಿಜಾಬ್ ವಿಷಯದಲ್ಲಿ ರಾಜ್ಯ ಸರ್ಕಾರ ಎಸ್‍ಡಿಪಿಐ ಜೊತೆ ಸೇರಿ ರಾಜ್ಯದಲ್ಲಿ ಅಶಾಂತಿಯ ಬೀಜ ಬಿತ್ತಲು ಹುನ್ನಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಮಂಡಲದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ಜೊತೆ ಇಂದು ಬೆಳಗ್ಗೆ ವಿಧಾನಸೌಧದ ಆವರಣದಲ್ಲಿ ವಾಯು ವಿಹಾರ ನಡೆಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಷಯದಲ್ಲಿ ಹೈಕೋರ್ಟ್ ಆದೇಶಕ್ಕೆ ಸೀಮಿತವಾಗಿ ಸರ್ಕಾರ ನಡೆದುಕೊಳ್ಳಬೇಕಿತ್ತು. ಅತಿರೇಖದ ವರ್ತನೆ ಪ್ರದರ್ಶನ ಮಾಡುತ್ತಿದೆ. ಫೆ.5ರಂದು ಆದೇಶ ಹೊರಡಿಸುವ ಅಗತ್ಯವೇ […]
ಕಾಂಗ್ರೆಸ್ ಹಿಜಾಬ್ ವಿವಾದದ ಮೆದುಳು, ಎಸ್‍ಡಿಪಿಐ ದೇಹ : ಕಟೀಲ್
ಬೆಂಗಳೂರು,ಫೆ.15- ಹಿಜಾಬ್ ವಿವಾದವನ್ನು ವಿದ್ಯಾರ್ಥಿನಿಯರ ಮೂಲಕ ಆಡಿಸುತ್ತಿರುವ ಕೀಲಿಕೈ ಬೇರೆಯೇ ಇದೆ. ಕಾಂಗ್ರೆಸ್ ಈ ವ್ಯೂಹದ ಮೆದುಳು, ಎಸ್ಡಿಪಿಐ ಅದರ ದೇಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಹಿಜಾಬ್ ವಿವಾದವನ್ನು ವಿದ್ಯಾರ್ಥಿನಿಯರ ಮೂಲಕ ಆಡಿಸುತ್ತಿರುವ ಕೀಲಿಕೈ ಬೇರೆಯೇ ಇದೆ. ಕಾಂಗ್ರೆಸ್ ಈ ವ್ಯೂಹದ ಮೆದುಳು. ಎಸ್ಡಿಪಿಐ ಅದರ ದೇಹ. ಇದು ಕೇವಲ ವಿವಾದವಲ್ಲ, ಮೂಲಭೂತವಾದವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ವ್ಯವಸ್ಥಿತ ಸಂಚು.#YesToUniform_NoToHijab — Nalinkumar Kateel (@nalinkateel) February 14, 2022 ಈ ಸಂಬಂಧ […]