ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ಸೇರಿ ಹಲವು ವಿಧೇಯಕಗಳಿಗೆ ರಾಜ್ಯಪಾಲರ ಅನುಮೋದನೆ

ಬೆಂಗಳೂರು, ಅ.12- ವಿಧಾನಮಂಡಲದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ ಸೇರಿ ಮೂರು ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ವಿಲೀನಗೊಳಿಸುವ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಅನುಷ್ಠಾನಗೊಳಿಸಲಾಗಿದೆ. ಹೊಸ ಶಿಕ್ಷಣ ನೀತಿಯನ್ವಯ ಎರಡು […]