ಶಾಲಾ ಹಂತದಲ್ಲೇ ಆತ್ಮರಕ್ಷಣೆ ತರಬೇತಿ

ಬೆಂಗಳೂರು,ಫೆ.21- ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಂಬಂಧಪಟ್ಟಂತೆ ಸರ್ಕಾರ ಬಿಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಶಾಲಾ ಹಂತದಲ್ಲಿ ಆತ್ಮರಕ್ಷಣಾ ತರಬೇತಿ ನೀಡುತ್ತಿದೆ ಎಂದು ಮಕ್ಕಳ ಮತ್ತು ಮಹಿಳಾ ಅಭಿವೃದ್ದಿ ಸಚಿವ ಆಚಾರ್ ಹಾಲಪ್ಪ ತಿಳಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ಸದಸ್ಯರಾದ ಸಲೀಂ ಅಹಮ್ಮದ್ ಪರವಾಗಿ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿವರ ನೀಡಿದರು. 2020ರಲ್ಲಿ 479 ಅತ್ಯಾಚಾರ, 4544 ಲೈಂಗಿಕ ದೌರ್ಜನ್ಯ, […]