ರಾಜ್ಯದಲ್ಲಿ ಸೆಮಿಕಂಡಕ್ಟರ್ ತಯಾರಿಕರಿಗೆ ವಿಶೇಷ ಪ್ರೋತ್ಸಾಹ

ಬೆಂಗಳೂರು,ಮಾ.4- ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಭಾರತ್ ಅಭಿಯಾನದ ಯೋಜನೆಯಡಿ ರಾಜ್ಯದಲ್ಲಿ ಸೆಮಿಕಂಡಕ್ಟರ್ ತಯಾರಿಕೆಗೆ ಹೂಡಿಕೆದಾರರನ್ನು ಆಕರ್ಷಿಸಲು ರಾಜ್ಯ ಸರ್ಕಾರವು ವಿಶೇಷ ಪ್ರೋತ್ಸಾಹ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2022-23ನೇ ಸಾಲಿನ ಬಜೆಟ್ ಮಂಡಿಸಿದ ಅವರು ಕೇಂದ್ರ ಸರ್ಕಾರದ 76 ಸಾವಿರ ಕೋಟಿ ರೂ. ವೆಚ್ಚದ ಸೆಮಿಕಂಡಕ್ಟರ್ ಯೋಜನೆಯ ಗರಿಷ್ಠ ಲಾಭವನ್ನು ರಾಜ್ಯ ಸರ್ಕಾರ ಪಡೆದುಕೊಳ್ಳಲಿದ್ದು, ಸೆಮಿಕಂಡಕ್ಟರ್ ತಯಾರಿಕೆಗೆ ಹೂಡಿಕೆದಾರರನ್ನು ಆಕರ್ಷಿಸಲು ಅಗತ್ಯವಾದ ನೆರವು ನೀಡಲಿದೆ ಎಂದು ತಿಳಿಸಿದರು. ಉದ್ಯೋಗ ಸೃಷ್ಟಿಗೆ