ಸೂಕ್ಷ್ಮ ಮತಗಟ್ಟೆಗಳ ಗುರುತಿಸುವ ಕಾರ್ಯ ಆರಂಭ

ಬೆಂಗಳೂರು,ಜ.14- ಮುಂಬರುವ ವಿಧಾನಸಭಾ ಚುನಾವಣೆಯ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸುವ ಕಾರ್ಯ ತ್ವರಿತಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸಭೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಪೂರ್ವ ಸಿದ್ದತಾ ಸಭೆ ನಡೆಸಿದ ಆಯುಕ್ತರು ಅಪರ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಈ ಸೂಚನೆ ನೀಡಿದ್ಧಾರೆ. ಸೂಕ್ಷ್ಮ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸಹಾಯಕ ಚುನಾವಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಿ ಅದರ ಪಟ್ಟಿಯನ್ನು ಸಲ್ಲಿಸಲು ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ […]