ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಮೀಸಲಾತಿ

ಬೆಳಗಾವಿ,ಡಿ.22-ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಇಲ್ಲಿನ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪಂಚಮಸಾಲಿ ಸಮುದಾಯವನ್ನು 3ಬಿ ಇಂದ 2ಬಿಗೆ ಸೇರ್ಪಡೆ ಮಾಡದೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಮೀಸಲಾತಿ ನೀಡುವ ತೀರ್ಮಾನ ಕೈಗೊಂಡಿದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ನೇತೃತ್ವದಲ್ಲಿ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಇದರಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬಹುದು ಎಂದು […]