ಬ್ಯಾಟರಿ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಕಾನೂನು

ಬೆಳಗಾವಿ,ಡಿ.26- ಬ್ಯಾಟರಿ ತ್ಯಾಜ್ಯ ವಿಲೇವಾರಿಯು ಮುಂಬರುವ ದಿನಗಳಲ್ಲಿ ಸಮಸ್ಯೆ ಆಗುವುದನ್ನು ಮನಗಂಡು ಪ್ರತ್ಯೇಕ ಕಾನೂನು ತಂದು ಪರಿಹಾರ ನೋಡಿಕೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಜೀವ ಪರಿಸ್ಥಿತಿ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ವಿಧಾನಪರಿಷತ್ತಿಗಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಹೊಸ ಕೈಗಾರಿಕಾ ನೀತಿ 2020-25ರ ಅನ್ವಯ ಇಲೆಕ್ಟ್ರಾನಿಕ್ ತ್ಯಾಜ್ಯ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ಪುನರ್ ಬಳಕೆ ಯಂತ್ರೋಪಕರಣಗಳನ್ನು ಅಳವಡಿಸುವ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಘಟಕಗಳಿಗೆ ಸಹಾಯಧನ ನೀಡಲಾಗುತ್ತಿದೆ ಎಂದರು. […]