ಮೊರಾಕೊ ವಿರುದ್ಧ ಬೆಲ್ಜಿಯಂ ಸೋಲು, ರೊಚ್ಚಿಗೆದ್ದ ಅಭಿಮಾನಿಗಳಿಂದ ದಾಂಧಲೆ

ಬ್ರಸೆಲ್ಸ್,ನ.28- ಕತಾರ್‍ನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಬೆಲ್ಜಿಯಂ ತಂಡ ಸೋಲು ಕಂಡ ನಂತರ ರಾಜಧಾನಿ ಬ್ರಸೆಲ್ಸ್ ನಲ್ಲಿ ಅಭಿಮಾನಿಗಳು ರೊಚ್ಚಿಗೆದ್ದು ದಾಂಧಲೆ ನಡೆಸಿದ್ದಾರೆ. ಕಳೆದ ರಾತ್ರಿ ಉದ್ರಿಕ್ತರು ಕಾರು ಮತ್ತು ಕೆಲವು ಎಲೆಕ್ಟ್ರಿಕ್ ಸ್ಕೂಟರ್‍ಗಳಿಗೆ ಬೆಂಕಿ ಹಚ್ಚಿದ್ದು, ಹಲವಾರು ಸ್ಥಳಗಳಲ್ಲಿ ಹಿಂಸಾಚಾರ ನಡೆದಿದೆ.ಪೊಲೀಸರು ಸುಮಾರು 12 ಜನರನ್ನು ಬಂಧಿಸಿದ್ದಾರೆ ಗಲಭೆಕೋರನ್ನು ತಡೆಯಲು ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಸಿಡಿಸಿದ್ದಾರೆ. ಮಧ್ಯರಾತ್ರಿ ಪರಿಸ್ಥಿತಿ ಸಹಜತೆಗೆ ಮರಳಿತು ಮತು ಭದ್ರತಾ ಪಡೆ ಗಸ್ತು ತಿರುಗುತ್ತಿದ್ದಾರೆ ಎಂದು ಪೊಲೀಸ್ ವಕ್ತಾರ ಇಲ್ಸೆ […]