ಏಳು ಮಂದಿ ಆರೋಪಿಗಳಿಂದ 45 ಲಕ್ಷ ಮೌಲ್ಯದ ಮಾಲು ಜಪ್ತಿ

ಬೆಂಗಳೂರು, ಫೆ.11- ಹಗಲು ಮತ್ತು ರಾತ್ರಿ ವೇಳೆ ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಹಾಗೂ ಸರಗಳ್ಳತನ ಮಾಡುತ್ತಿದ್ದ ಏಳು ಮಂದಿಯನ್ನು ಉತ್ತರ ವಿಭಾಗದ ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿ 45 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 21 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಶಿಕ್ಷಕಿಯೊಬ್ಬರು ಜ.10ರಂದು ಮಧ್ಯಾಹ್ನ 3.35ರ ಸುಮಾರಿನಲ್ಲಿ ಶಾಲೆ ಮುಗಿಸಿಕೊಂಡು ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸಿ ಹೆಸರಘಟ್ಟ ಮುಖ್ಯರಸ್ತೆ ವಿಡಿಯೋ ಬಸ್ ನಿಲ್ದಾಣದ ಬಳಿ ಇಳಿದು ಟಿ.ದಾಸರಹಳ್ಳಿಯ ಭುವನೇಶ್ವರಿ ನಗರದಲ್ಲಿರುವ ಮನೆಗೆ ನಡೆದುಕೊಂಡು […]