ಶರದ್ ಯಾದವ್ ನಿವಾಸಕ್ಕೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದ ರಾಹುಲ್‍

ನವದೆಹಲಿ,ಜ.13- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ಅವರ ನಿವಾಸಕ್ಕೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು. 75 ವರ್ಷದ ಹಿರಿಯ ರಾಜಕಾರಣಿ ಶರದ್ ಯಾದವ್ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ದೀರ್ಘಕಾಲದವರೆಗೆ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಆರ್‍ಜೆಡಿ ನಾಯಕ ನಿಯಮಿತವಾಗಿ ಡಯಾಲಿಸಿಸ್ ಒಳಗಾಗುತ್ತಿದ್ದರು. ಶರದ್ ಯಾದವ್‍ರ ನಿವಾಸಕ್ಕೆ ಭೇಟಿ ನೀಡಿದ್ದ ರಾಹುಲ್‍ಗಾಂಧಿ, ಗೌರವ ಸಲ್ಲಿಸಿ, ದುಃಖತಪ್ತ ಕುಟುಂಬ ಸದಸ್ಯರಿಗೆ […]