ನೆಹರೂ ಹಾರಿಸಿದ ತ್ರಿವರ್ಣ ಧ್ವಜದ ಚಿತ್ರ ಟ್ವೀಟ್ ಮಾಡಿದ ಮೋದಿ

ನವದೆಹಲಿ, ಜು 22- ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಅಥವಾ ಪ್ರದರ್ಶಿಸುವ ಮೂಲಕ ಹರ್ ಘರ್ ತಿರಂಗ ಆಂದೋಲನವನ್ನು ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಮನವಿ ಮಾಡಿದ್ದಾರೆ. ಈ ಆಂದೋಲನ ತ್ರಿವರ್ಣ ಧ್ವಜದೊಂದಿಗಿನ ನಮ್ಮ ಸಂಪರ್ಕವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.ನಾವು ಬ್ರಿಟೀಷರ ಕ್ರೂರ ಆಡಳಿತದ ವಿರುದ್ಧ ಹೋರಾಡುತ್ತಿರುವಾಗ ಮುಕ್ತ ಭಾರತಕ್ಕಾಗಿ ಧ್ವಜದ ಕನಸು ಕಂಡವರೆಲ್ಲರ ಧೈರ್ಯ-ಸಾಹಸ ಮತ್ತು ಪ್ರಯತ್ನಗಳನ್ನು ನಾವು ಇಂದು ನೆನಪಿಸಿಕೊಳ್ಳುತ್ತೇವೆ. ಅವರ ಕನಸುಗಳ ಭಾರತವನ್ನು ನಿರ್ಮಿಸಲು ನಾವು ನಮ್ಮ ಬದ್ಧತೆಯನ್ನು […]