ಹಾಸನಾಂಬ ದರ್ಶನೋತ್ಸವ ದಿನಗಳ ಹೆಚ್ಚಳಕ್ಕೆ ಪ್ರಸ್ತಾವನೆ ಇಲ್ಲ : ಶಶಿಕಲಾ ಜೊಲ್ಲೇ

ಹಾಸನ, ಅ.15- ಹಾಸನಾಂಬ ದರ್ಶನೋತ್ಸವ ದಿನಗಳ ಹೆಚ್ಚಳಕ್ಕೆ ಅವಕಾಶ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಜರಾಯಿ ಖಾತೆ ಸಚಿವರಾದ ಶಶಿಕಲಾ ಜೊಲ್ಲೇ ಸ್ಪಷ್ಟಪಡಿಸಿದರು. ನಗರದ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಈ ಹಿಂದೆ ಸರ್ಕಾರಕ್ಕೆ ದರ್ಶನೋತ್ಸವ ದಿನ ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು […]

ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ರಾಜ್ಯಮಟ್ಟದ ಅರ್ಚಕರ ಸಮಾವೇಶ

ಬೆಂಗಳೂರು ಜುಲೈ 18: ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳ ಅರ್ಚಕರ ರಾಜ್ಯಮಟ್ಟದ ಸಮಾವೇಶವನ್ನು ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಆಯೋಜಿಸಲಾಗುವುದು ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ತಿಳಿಸಿದರು. ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ 3ನೇ ರಾಜ್ಯ ಧಾರ್ಮಿಕ ಪರಿಷತ್ತಿನ 16 ನೇ ಸಭೆಯಲ್ಲಿ ರಾಜ್ಯದ ಹಲವಾರು ಧಾರ್ಮಿಕ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರಗಳನ್ನು ತಗೆದುಕೊಳ್ಳಲಾಯಿತು. ರಾಜ್ಯ ಸರಕಾರ ಮುಜರಾಯಿ ಅರ್ಚಕರ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹೊರತಂದಿದೆ. […]

ಬೆಂಗಳೂರಿನಿಂದ ಕಾಶಿಗೆ ವಿಶೇಷ ರೈಲು ಸೇವೆ ಆರಂಭ

ಬೆಂಗಳೂರು, ಜು.11- ಜೀವನದಲ್ಲಿ ಒಮ್ಮೆಯಾದರೂ ಕಾಶಿಯಾತ್ರೆ ಕೈಗೊಳ್ಳುವ ಬಹುಜನರ ಆಸೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಬೆಂಗಳೂರಿನಿಂದ ಕಾಶಿಗೆ ನೇರ ರೈಲು ಸೇವೆ ಆರಂಭಿಸುತ್ತಿದೆ. ಬಯ್ಯಪ್ಪನಹಳ್ಳಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು ವಾರಣಾಸಿಗೆ ಭಾರತ್ ಗೌರವ್ ವಿಶೇಷ ರೈಲು ಯಾತ್ರೆ ಸೇವೆಯ ಕುರಿತು ಪರಿಶೀಲನೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಇದರ ಬಗ್ಗೆ ಮಾಹಿತಿ ನೀಡಿದರು. ಬರುವ ಶ್ರಾವಣ ಮಾಸದ ಅಂತ್ಯದವೇಳೆಗೆ ಕಾಶಿಗೆ ವಿಶೇಷ ರೈಲು ಚಾಲನೆಗೊಳ್ಳಲಿದೆ ಎಂದು ಘೋಷಿಸಿದ ಅವರು, ಇದಕ್ಕಾಗಿ […]