ಕಾಂಗ್ರೆಸ್‍ನಲ್ಲಿ ಎಷ್ಟು ರೌಡಿಶೀಟರ್ ಇದ್ದಾರೆ ಲೆಕ್ಕ ಹಾಕಿಕೊಳ್ಳಿ : ಸಿಎಂ ಬೊಮ್ಮಾಯಿ

ನವದೆಹಲಿ, ನ.29- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲು ಸಮಯ ಕೇಳಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಡ್ಡ ಅವರನ್ನು ಭೇಟಿಯಾಗಲು ಸಮಯ ಕೇಳಿದ್ದು, ನಾಳೆ ಸಿಗುವ ಸಾಧ್ಯತೆ ಇದೆ. ರಾಜ್ಯದಲ್ಲಿನ ವಿದ್ಯಮಾನಗಳು, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು. ಗಡಿಯಲ್ಲಿ ಡ್ರೋನ್ ಹೊಡೆದುರುಳಿಸಿದ ಬಿಎಸ್‍ಎಫ್ ಪಡೆ ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ ಯಾದವ್, ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗುತ್ತಿರುವುದಾಗಿ ತಿಳಿಸಿದರು. ಗಜೇಂದ್ರ […]

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಯ ಬರ್ಬರ ಹತ್ಯೆ

ಶಿವಮೊಗ್ಗ.ಜುಲೈ 14- ಹಾಡಹಗಲೇ ರೌಡಿ ಶೀಟರ್‍ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವಿನೋಬನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ 10.30ರ ಸಂದರ್ಭದಲ್ಲಿ ರಸ್ತೆಯಲ್ಲಿ ನಡೆದುಹೊಗುತ್ತಿದ್ದ ರೌಡಿ ಶೀಟರ್ ಹಂದಿ ಹಣಿ ಮೇಲೆ ಇನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಾಗರ ರಸ್ತೆಯಲ್ಲಿರುವ ನಿವೇಶನ ಒಂದರ ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸುಮಾರು ನಾಲ್ಕರಿಂದ ಐದು ದುಷ್ಕರ್ಮಿಗಳು ಈ ಕೃತ್ಯ […]