BIG NEWS: ರಾಜಕೀಯ ಜೀವನ ಕುರಿತು ಮಹತ್ವದ ಘೋಷಣೆ ಮಾಡಿದ ಯಡಿಯೂರಪ್ಪ

ಬೆಂಗಳೂರು,ಜು.22-ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸ್ರ್ಪಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪುತ್ರ ವಿಜಯೇಂದ್ರ ಮೈಸೂರಿನ ವರುಣ ಕ್ಷೇತ್ರದಿಂದ ಸ್ರ್ಪಧಿಸುವುದಿಲ್ಲ. ಬದಲಾಗಿ ನನ್ನ ಸ್ವ ಕ್ಷೇತ್ರ ಶಿಕಾರಿಪುರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳುವ ಮೂಲಕ ಹಲವು ರಾಜಕೀಯ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬಿಜೆಪಿ ಉಪಾಧ್ಯಕ್ಷರಾಗಿರುವ ವಿಜಯೇಂದ್ರ ರಾಜ್ಯದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಈ ಮೊದಲು ನಡೆದ ಹಲವು ವಿಧಾನಸಭೆ ಚುನಾವಣೆಯ ನೇತೃತ್ವ ವಹಿಸಿದ್ದ ಅವರು, ಬಿಜೆಪಿ ಗೆಲುವಿನ ರೂವಾರಿಯಾಗಿದ್ದರು. […]