ಬಿಎಂಟಿಸಿ ಬಸ್ ಹರಿದು ಸಾವನ್ನಪ್ಪಿದ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ.ಪರಿಹಾರ ನೀಡಿ

ಬೆಂಗಳೂರು, ಅ.24-ಬಿಎಂಟಿಸಿ ಬಸ್ ಹರಿದು ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಕೆಲ ದಿನಗಳ ಹಿಂದೆ ವಿವಿ ಕ್ಯಾಂಪಸ್‍ನಲ್ಲಿ ಬಸ್ ಹತ್ತುತ್ತಿದ್ದ ವಿದ್ಯಾರ್ಥಿನಿ ಶಿಲ್ಪಾ ಎಂಬುವರ ಮೇಲೆ ಬಿಎಂಟಿಸಿ ಬಸ್ ಹರಿದು ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಲ್ಪಾ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದರು. ಶಿಲ್ಪಾ ಅವರ ಮೇಲೆ ಬಸ್ ಹರಿದಾಗಲೇ ರೊಚ್ಚಿಗೆದ್ದಿದ್ದ ವಿವಿ ವಿದ್ಯಾರ್ಥಿಗಳು ಕ್ಯಾಂಪಸ್ ಒಳಗೆ ಸಾರ್ವಜನಿಕ […]