ರಾಜ್ಯದಲ್ಲಿ ವರುಣಾರ್ಭಟಕ್ಕೆ ನಲುಗಿದ ಜನ
ಬೆಂಗಳೂರು,ಜು.11-ಮಲೆನಾಡು, ಕರಾವಳಿ, ಕೊಡುಗು, ಶಿವಮೊಗ್ಗ ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಗುಡ್ಡ ಕುಸಿತ ಉಂಟಾಗಿ ರಸ್ತೆಗಳ ಸಂಚಾರ ಕಡಿತಗೊಂಡಿದೆ. ನದಿ ಹಳ್ಳಕೊಳ್ಳಗಳು ತುಂಬಿ ತುಳುಕುತ್ತಿದ್ದು, ನದಿಪಾತ್ರದ ಜನರು ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಶಿರಾಡಿಘಾಟ್, ಚಾರ್ಮುಡಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಗೊಳಿಸಲಾಗಿದೆ. ಕರಾವಳಿ, ಉತ್ತರಕನ್ನಡ, ದಕ್ಷಿಣ ಕನ್ನಡದಲ್ಲಿ ನಿರಂತರ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಮಡಿಕೇರಿಯಲ್ಲಿ ಮಳೆಯೊಂದಿಗೆ ದಟ್ಟ ಮಂಜು ಆವರಿಸಿದ್ದು, ರಸ್ತೆ ಕಾಣದೆ ವಾಹನ ಸವಾರರು ಪರದಾಡುತ್ತಿದ್ದಾರೆ. ಹಲವೆಡೆ […]