ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ಬೆಂಗಳೂರು,ಜ.12- ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರು ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಯಾದಗಿರಿಗೆ ತೆರಳಲು ಅಗಮಿಸಿದ್ದ ಸ್ವಾಮೀಜಿ ಅವರು ಪ್ಲಾಟ್‍ಫಾರಂನಲ್ಲಿ ನಡೆದುಕೊಂಡು ಹೋಗುವಾಗ ದಿಢೀರ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಜೊತೆಯಲ್ಲಿದ್ದ ಭಕ್ತರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಸ್ವಾಮೀಜಿ ಇಹಲೋಕ ತ್ಯಜಿಸಿದರು ಎಂದು ತಿಳಿದುಬಂದಿದೆ. ಅವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ. ಮುಂದಿನ ತಿಂಗಳು 25ನೇ ಪಟ್ಟಾಧಿಕಾರ ಮಹೋತ್ಸವ ನಿಮಿತ್ತ ಈ ಕಾರ್ಯಕ್ರಮಕ್ಕೆ […]