ಡಾ. ಶ್ರೀ ಶಿವಕುಮಾರಸ್ವಾಮೀಜಿ ಪುಣ್ಯಸ್ಮರಣೆ, ಗದ್ದುಗೆಗೆ ವಿಶೇಷ ಪೂಜೆ

ತುಮಕೂರು,ಜ.21- ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಹೆಸರಾಗಿರುವ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 3ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಶ್ರೀಗಳ ಗದ್ದುಗೆಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕೈಂಕರ್ಯಗಳು ನೆರವೇರಿದವು. ಸಿದ್ಧಗಂಗಾ ಮಠಾೀಶರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ವೇದಘೋಷ ಮಂತ್ರಗಳೊಂದಿಗೆ ಮುಂಜಾನೆ ಪೂಜೆಯನ್ನು ವಿವಿಧ ಮಠದ ಶ್ರೀಗಳು ನಡೆಸಿದರು. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಚರಿಸಿದ್ದು, ಬೆಳಿಗ್ಗೆಯೇ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆಯನ್ನು ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ಮಾಡಲಾಗಿದ್ದು, ಮಹಾಪೂಜೆಯ […]