ಮುರುಘಾ ಶ್ರೀ ವಿರುದ್ಧ ಪಿತೂರಿ, ಬಂಧಿತರಿಗೆ 14 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ,ನ.14- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀ ವಿರುದ್ಧ ಪಿತೂರಿ ನಡೆಸಿರುವ ಆರೋಪದ ಮೇಲೆ ಬಂಧಿತರಾಗಿರುವ ಎಸ್.ಕೆ.ಬಸವರಾಜನ್ ಹಾಗೂ ಬಸವರಾಜೇಂದ್ರ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಸೋಮವಾರ ಅವರನ್ನು ಜಿಲ್ಲಾ ಒಂದನೇ ಹೆಚ್ಚುವರಿ ಜೆಎಂಎಫ್‍ಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾೀಧಿಶರು ಆರೋಪಿಗಳಾದ ಎಸ್.ಕೆ.ಬಸವರಾಜನ್ ಹಾಗೂ ಬಸವರಾಜೇಂದ್ರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದರು. […]

ಮುರುಘಾ ಶ್ರೀಗಳ ಮೇಲೆ ಸುಳ್ಳು ಆರೋಪ: ಬಿಎಸ್‌ವೈ

ಬೆಂಗಳೂರು,ಆ.28- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಕ್ಕೆ ತುತ್ತಾಗಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಸುಳ್ಳು ಆರೋಪ ದಾಖಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾ ಮಠದ ಬಗ್ಗೆ ಗೊತ್ತಿರುವ ಯಾರೂ ಕೂಡ ಶ್ರೀಗಳ ಬಗ್ಗೆ ಇಂತಹ ಆರೋಪ ಮಾಡಲು ಸಾಧ್ಯವೇ ಇಲ್ಲ. ಇದು ವ್ಯವಸ್ಥಿತ ಷಡ್ಯಂತರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಹಲವು ವರ್ಷಗಳಿಂದ ಶ್ರೀಗಳು ಶಿಕ್ಷಣ, ಆರೋಗ್ಯ, ಧಾರ್ಮಿಕ ಸೇರಿದಂತೆ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು […]