ಹೃದಯಾಘಾತದಿಂದ ಸಿಂದಗಿ ಜೆಡಿಎಸ್ ಅಭ್ಯರ್ಥಿ ನಿಧನ

ಬೆಂಗಳೂರು, ಜ.21- ಸಿಂದಗಿ ವಿಧಾನಸಭಾ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಹಾಗೂ ನಿವೃತ್ತ ಯೋಧ ಶಿವಾನಂದ ಪಾಟೀಲ್ ಸೋಮಜ್ಯಾಳ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ ಮತ್ತು ಪುತ್ರಿ ಅವರನ್ನು ಅಗಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅವರನ್ನು ಘೋಷಣೆ ಮಾಡಲಾಗಿತ್ತು. ನಿನ್ನೆ ಮಧ್ಯಾಹ್ನ ನಾಗಠಾಣ ಕ್ಷೇತ್ರದ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿದ್ದರು. ಪಕ್ಷದ ಕಾರ್ಯಕ್ರಮ ಮುಗಿಸಿ ನಿನ್ನೆ ರಾತ್ರಿ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು. ತಡ ರಾತ್ರಿತೀವ್ರವಾಗಿ ಅಸ್ವಸ್ಥಗೊಂಡಿದ್ದ […]