ಬಿಬಿಎಂಪಿ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ

ಬೆಂಗಳೂರು,ಜ.30- ಬಿಬಿಎಂಪಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳ ಕೊರತೆ ಎದುರಾಗಿದೆ. ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ರೀತಿಯ ಚಿಕಿತ್ಸಾ ಸೌಲಭ್ಯ ದೊರೆಯಲಿದೆ ಎಂಬು ಬಿಬಿಎಂಪಿ ಬೊಬ್ಬೆ ಹೊಡೆಯುತ್ತಿದೆ. ಆದರೆ, ಅಂತಹ ಕೇಂದ್ರಗಳಿಗೆ ತೆರಳಿದರೆ ಅಲ್ಲಿ ಯಾವುದೇ ಔಷಧಿದೋಪಚಾರ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಇರುವುದನ್ನು ಒಪ್ಪಿಕೊಂಡಿರುವ ವಿಶೇಷ ಆಯುಕ್ತ ತ್ರಿಲೋಕ್‍ಚಂದ್ರ ಅವರು ಅದಷ್ಟು ಬೇಗ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲವೊಂದು […]
ಮಹಾರಾಷ್ಟ್ರದಲ್ಲಿ ಮೊಟ್ಟೆಗಳ ಕೊರತೆ

ಔರಂಗಾಬಾದ್, ಜ.18- ದೇಶಾದ್ಯಂತ ಮೊಟ್ಟೆಯ ಬೆಲೆ ಏರಿಕೆಯಾಗಿರುವ ಬೆನ್ನಲ್ಲೆ ಮಹಾರಾಷ್ಟ್ರದಲ್ಲಿ ಒಂದು ಕೋಟಿ ಮೊಟ್ಟೆಗಳ ಕೊರತೆ ಎದುರಾಗಿದೆ ಎಂದು ಪಶುಸಂಗೋಪನಾ ಇಲಾಖೆ ತಿಳಿಸಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 2.25 ಕೋಟಿಗೂ ಹೆಚ್ಚು ಮೊಟ್ಟೆಗಳನ್ನು ಸೇವಿಸಲಾಗುತ್ತದೆ. ರಾಜ್ಯದಲ್ಲಿ ಪ್ರತಿದಿನ ಒಂದರಿಂದ ಒಂದುವರೆ ಕೋಟಿ ಮೊಟ್ಟೆಗಳನ್ನು ಉತ್ಪಾದಿಸಲಾಗುತ್ತದೆ. ಬಾಕಿ ಒಂದು ಕೋಟಿ ಮೊಟ್ಟೆಗಳ ಬೇಡಿಕೆ ಇದೆ. ಇದನ್ನು ಪೂರೈಸಲು ಪಶುಸಂಗೋಪನಾ ಇಲಾಖೆ ಯೋಜನೆ ಎಂದು ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ಧನಂಜಯ್ ಪರ್ಕಳೆ ತಿಳಿಸಿದ್ದಾರೆ. ಸದ್ಯಕ್ಕೆ ಮೊಟ್ಟೆ ಕೊರತೆ ನೀಗಿಸಲು ಕರ್ನಾಟಕ, ತೆಲಂಗಾಣ, […]
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಏರಿಕೆ, ಕಾಡುತ್ತಿದೆ ಶಿಕ್ಷಕರ ಕೊರತೆ

ಬೆಂಗಳೂರು,ನ.7- 2020-21ಕ್ಕೆ ಹೋಲಿಸಿದರೆ ಶಾಲಾ ಶಿಕ್ಷಣದ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಉನ್ನತ ಮಾಧ್ಯಮಿಕ ಮಟ್ಟದಲ್ಲಿ 2021-22ರಲ್ಲಿ ಜಿಇಆರ್ (ಒಟ್ಟು ದಾಖಲಾತಿ ಅನುಪಾತ ) ಸುಧಾರಿಸಿದೆ ಎಂದು ವರದಿ ಹೇಳಿದೆ. ಶಿಕ್ಷಣ ಇಲಾಖೆ ಏಕೀಕೃತ ಜಿಲ್ಲಾ ಶಿಕ್ಷಣ ವ್ಯವಸ್ಥೆ (ಯುಡಿಎಸ್‍ಇ+) ವರದಿ ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಹೆಚ್ಚಿದ್ದರೂ ಶಿಕ್ಷಕರ ಸಂಖ್ಯೆ ಮಾತ್ರ ಕಡಿಮೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ಒಟ್ಟು 76,450 ಶಾಲೆಗಳಿದ್ದು, ಇದರಲ್ಲಿ 49,679 ಸರ್ಕಾರಿ ಶಾಲೆಗಳು, 7,110 ಸರ್ಕಾರಿ […]