ಶ್ರೀರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ ಸಮರ್ಪಣೆ

ಅಯೋಧ್ಯೆ (ಉತ್ತರ ಪ್ರದೇಶ), ಡಿ.15- ಕರ್ನಾಟಕದ ರಾಮನಗರ ಜಿಲ್ಲೆಯಿಂದ ಜಿಲ್ಲೆ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಇಲ್ಲಿಗೆ ಆಗಮಿಸಿರುವ 150 ಯಾತ್ರಾರ್ಥಿಗಳ ತಂಡವು ಇಲ್ಲಿ ಮೈದಾಳುತ್ತಿರುವ ಭವ್ಯ ಶ್ರೀರಾಮ ಮಂದಿರಕ್ಕೆ 1.50 ಕೆಜಿ ತೂಕದ ಬೆಳ್ಳಿ ಇಟ್ಟಿಗೆ, ಸೀತಾಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು ಇಂದು ಸಮರ್ಪಿಸಿತು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಚಿವರ ನೇತೃತ್ವದಲ್ಲಿ ಭಕ್ತರ ತಂಡವು ರಾಮ ಮಂದಿರ ಆವರಣಕ್ಕೆ ಆಗಮಿಸಿತು. ನಂತರ, ಇಲ್ಲಿರುವ ಕನ್ನಡಿಗ ಅರ್ಚಕರಾದ ಗೋಪಾಲ್ ಭಟ್ ಮತ್ತು […]