ನಾಳೆಯಿಂದ ಸಿದ್ಧಗಂಗೆಯಲ್ಲಿ ಕೃಷಿ-ಕೈಗಾರಿಕಾ ವಸ್ತು ಪ್ರದರ್ಶನ

ತುಮಕೂರು, ಫೆ.17- ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಸಂದರ್ಭದಲ್ಲಿ ಜರುಗುವ ಪ್ರಸಿದ್ಧ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ಅಂಗವಾಗಿ ನಾಳೆಯಿಂದ ಮಾರ್ಚ್ 4ರ ವರೆಗೆ 15 ದಿನಗಳ ಕಾಲ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಸ್ತು ಪ್ರದರ್ಶನ ಟ್ರಸ್ಟ್  ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಬಿ.ಗಂಗಾಧರಯ್ಯ, ವಸ್ತು ಪ್ರದರ್ಶನವನ್ನು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಘಾಟಿಸಲಿದ್ದು, ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯವಹಿಸಲಿದ್ದಾರೆ. […]