ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ನಿಮಿತ್ತ ಸಿದ್ಧಗಂಗಾ ಶ್ರೀಗಳಿಂದ ಭಿಕ್ಷಾಟನೆ

ತುಮಕೂರು, ಫೆ. 23- ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಗಂಗಾ ಕ್ಷೇತ್ರದ ಆರಾಧ್ಯ ದೈವ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ಮಹೋತ್ಸವದ ಅಂಗವಾಗಿ ಹಿರಿಯ ಶ್ರೀಗಳ ಮಾದರಿಯಲ್ಲೆ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ನಗರದಾದ್ಯಂತ ಸಂಚರಿಸಿ ಭಿಕ್ಷಾಟನೆ ನಡೆಸಿದರು. ಶ್ರೀಮಠದ ಪರಂಪರೆಯನ್ನು ಮುನ್ನಡೆಸುತ್ತಿರುವ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ಹಿರಿಯ ಶ್ರೀಗಳಂತೆ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ವಿವಿಧ ಅಂಗಡಿಗಳು, ವರ್ತಕರನ್ನು ಭೇಟಿ ಮಾಡಿ ಭಿಕ್ಷಾಟನೆ ನಡೆಸಿದರು. ನಗರದ ಅಶೋಕ […]