ಪ್ರಚಾರಕ್ಕಾಗಿ ಸಿದ್ದರಾಮಯ್ಯ ಗಿಮಿಕ್ ಮಾಡ್ತಿದ್ದಾರೆ : ಬಿಎಸ್ವೈ ಟಾಂಗ್

ಬೆಂಗಳೂರು, ಮಾ.23- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಿ ಸ್ಪರ್ಧೆ ಮಾಡಬೇಕೆಂಬುದು ಯಾರಲ್ಲೂ ಗೊಂದಲ ಉಂಟಾಗಿಲ್ಲ. ಇದು ಕೇವಲ ಪ್ರಚಾರ ಪಡೆಯುವ ಗಿಮಿಕ್ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ, ವರುಣ, ಕಡೂರು, ಕುಷ್ಟಗಿ ಹೀಗೆ ನಾನಾಕಡೆ ಹೆಸರು ಹೇಳಿಕೊಂಡು ಸಿದ್ದರಾಮಯ್ಯ ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆಯೇ ಹೊರತು ಅವರ ಸ್ಪರ್ಧೆ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು. ರೋಷನ್ ಬೇಗ್ ಪುತ್ರ ರುಮಾನ್ ಬೇಗ್ ಬಿಜೆಪಿಗೆ ಸುಮ್ಮನೆ ಜನರ ಮಧ್ಯೆ […]
ಸಿದ್ದರಾಮಯ್ಯನವರು ಎಲ್ಲಿ ಸ್ಪರ್ಧಿಸಲಿಚ್ಚಿಸುತ್ತಾರೋ ಅಲ್ಲಿ ಅವಕಾಶ : ಡಿಕೆಶಿ

ಬೆಂಗಳೂರು,ಮಾ.21- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಯಸಿದ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಕಾಂಗ್ರೆಸ್ ಅವಕಾಶ ಮಾಡಿಕೊಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಶ್ರೀ ಆದಿಚುಂಚನಗಿರಿ ಶ್ರೀ ಕ್ಷೇತ್ರಕ್ಕೆ ಅಮಾವಾಸೆ ಪ್ರಯುಕ್ತ ಪತ್ನಿ ಉಷಾ ಅವರೊಂದಿಗೆ ಭೇಟಿ ನೀಡಿ ಕಾಲಭೈರವೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಡಿ.ಕೆ.ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿದ್ದರಾಮಯ್ಯ ಅವರ ಕ್ಷೇತ್ರ ಆಯ್ಕೆ ಬಗ್ಗೆ ವ್ಯಾಪಕ ಗೊಂದಲಗಳು ಸೃಷ್ಟಿಯಾಗಿವೆ. ಕೋಲಾರದಿಂದ ಕಾರ್ಯಕರ್ತರು, ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿ ಸಿದ್ದರಾಮಯ್ಯ ಅವರ […]
ಕೋಲಾರದಲ್ಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು,ಮಾ.21- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದಲೇ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿಂದು ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಾನಂದ ವೃತ್ತದಲ್ಲಿರುವ ಸಿದ್ದರಾಮಯ್ಯ ಅವರ ಸರ್ಕಾರಿ ಬಂಗಲೆ ಬಳಿಗೆ ನೂರಾರು ವಾಹನಗಳಲ್ಲಿ ಸ್ವಯಂ ಪ್ರೇರಿತವಾಗಿ ಆಗಮಿಸಿದ ಸಾವಿರಾರು ಕಾರ್ಯಕರ್ತರು ಮುತ್ತಿಗೆ ಹಾಕಿ, ಧರಣಿ ನಡೆಸಿ ಸಿದ್ದರಾಮಯ್ಯ ಅವರನ್ನು ಮನವೋಲಿಸುವ ಯತ್ನ ನಡೆಸಿದರು. ಸಿದ್ದರಾಮಯ್ಯ ಈ ಮೊದಲು ತಾವು ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ನಡೆಸುವುದಾಗಿ ಘೋಷಿಸಿದ್ದರು. ಈ ನಡುವೆ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ […]
ಸಿದ್ದರಾಮಯ್ಯ ವಿಡಿಯೋ ವೈರಲ್, ರೊಚ್ಚಿಗೆದ್ದ ಬಿಜೆಪಿ

ಬೆಂಗಳೂರು- ಕುಂದಾನಗರಿ ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಸಮಾರಂಭಕ್ಕೆ ಜನರ ಸೇರಿಸುವ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ವಿಡಿಯೋ ಸಂಬಂಧ ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ ಮಾಡಿದೆ. ಸಾಮಾಜಿಕ ಜಾಲತಾಣ ಟ್ವಿಟರ್‍ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ ಎಂದು ಟೀಕಿಸಿದೆ. ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಅವರಿಗೆಲ್ಲ ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು. […]
ಸಿದ್ದರಾಮಯ್ಯ ಸುಳ್ಳುಗಳು ಸತ್ಯವಾಗಲ್ಲ : ಸಿಎಂ ಕಿಡಿ

ಹುಬ್ಬಳ್ಳಿ,ಫೆ.26- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳಿನ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಅವರು ಹೇಳಿರುವ ಸುಳ್ಳು ಒಂದೊಂದಾಗಿ ಹೊರಬರುತ್ತಿದೆ. ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವ ಭರವಸೆಗಳ ಕುರಿತು ವಿಧಾನಸಭೆ ಅವೇಶನದಲ್ಲಿಯೇ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಬ್ಬರ ಬಗ್ಗೆ ಸಾವಿರ ಬಾರಿ ಸುಳ್ಳು ಹೇಳಿದರೆ ಅದು ಸತ್ಯವಾಗುತ್ತದೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಸತ್ಯ ಸತ್ಯವೇ, ಸುಳ್ಳು ಸುಳ್ಳೇ. ಅವರು ಹೇಳಿದ ತಕ್ಷಣ ಸುಳ್ಳು ಸತ್ಯವಾಗುವುದಿಲ್ಲ. ಸತ್ಯ ಸುಳ್ಳಾಗುವುದಿಲ್ಲ ಎಂದರು. ಕೃಷಿ, […]
ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು,ಫೆ.24- ಸಿಎಂ ಬಸವರಾಜ ಬೊಮ್ಮಾಯಿ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಹಿಂದಿನ ಕಾಂಗ್ರೆಸ್ ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಮುಚ್ಚಿಕೊಳ್ಳಲು ಎಸಿಬಿ ರಚನೆ ಮಾಡಿತ್ತು ಎಂದು ಸುಳ್ಳು ಹೇಳಿರುವುದು ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಡ್ವೊಕೇಟ್ ಜನರಲ್ ಅವರ ಮೂಲಕ ಎಸಿಬಿ ರಚನೆ ಮಾಡಿರುವುದು ಸರಿಯಿದೆ, ಎಸಿಬಿಯು ಲೋಕಾಯುಕ್ತ ಕಾಯ್ದೆಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಕೋರ್ಟಿನಲ್ಲಿ ಹೇಳಿಸಿದ್ದಾರೆ. ಆದರೆ ಹೊರಗಡೆ ತಮ್ಮ ನಿಲುವಿಗೆ ವಿರುದ್ಧವಾಗಿ ವರ್ತಿಸುತ್ತಿದ್ದಾರೆ. […]
ದ್ವೇಷ ಭಾಷಣ ಕೆರಳಿದ ಕಾಂಗ್ರೆಸ್, ಸದನದಲ್ಲಿ ಕೋಲಾಹಲ

ಬೆಂಗಳೂರು, ಫೆ. 16-ಪದೇ ಪದೇ ಮಾಡಿದ ಮನವಿಗೆ ಸ್ಪಂದಿಸದ ಕಾರಣ ಕಾಂಗ್ರೆಸ್ ಶಾಸಕ ಈಶ್ವರ ಖಂಡ್ರೆ ಅವರನ್ನು ಸದನದಿಂದ ಹೊರ ಹಾಕಬೇಕಾಗುತ್ತದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಎಚ್ಚರಿಕೆ ನೀಡಿದ ವಿಚಾರ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಎಡೆಮಾಡಿಕೊಟ್ಟಿತು. ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಅವರು, ರಾಜ್ಯದಲ್ಲಿ ಇತ್ತೀಚಿನ ದ್ವೇಷಭಾಷಣ ಕುರಿತಂತೆ ಸಚಿವರು ಹಾಗೂ ಜನಪ್ರತಿನಿಗಳು ನೀಡುತ್ತಿರುವ ಹೇಳಿಕೆ ಬಗ್ಗೆ ಪ್ರಸ್ತಾಪ ಮಾಡಿದರು.ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಾವು […]
ಸಿದ್ದರಾಮಯ್ಯ ವಿರುದ್ಧ ಹೇಳಿಕೆಗೆ ಅಶ್ವತ್ಥ್ ನಾರಾಯಣ್ ವಿಷಾದ

ಬೆಂಗಳೂರು, ಫೆ.16- ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇನೆ ವಿನಃ ವೈಯಕ್ತಿಕವಾಗಿ ಅಲ್ಲ. ಹೀಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನನ್ನ ಹೇಳಿಕೆಯಿಂದ ವೈಯಕ್ತಿಕವಾಗಿ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಉನ್ನತ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವದಲ್ಲಿ ಇದ್ದೇವೆ. ಯುದ್ಧದ ಕಾಲದಲ್ಲಿ ಇಲ್ಲ. ಪ್ರಜಾಪ್ರಭುತ್ವದಲ್ಲಿ ಗೆಲ್ಲಬೇಕಿದೆ. ಆ ವಿಚಾರವಾಗಿ ಹೇಳಿದ್ದೇನೆ ಹೊರತು ಬೇರೆ ರೀತಿ ಅಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇನೆ ವಿನಃ ನನ್ನ ಮಾತಿನ ಉದ್ದೇಶ ವೈಯಕ್ತಿಕವಾಗಿ ಅಲ್ಲ. ಮಂಡ್ಯದಲ್ಲಿ ಕಸಬಾ […]
ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಸಿದ್ದುಗೆ ಮುಗುಬಿದ್ದ ಕಾರ್ಯಕರ್ತರು

ಬೆಂಗಳೂರು, ಫೆ.14- ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾದಾಮಿಯಿಂದಲೇ ಮತ್ತೆ ಸ್ಪರ್ಧೆ ಮಾಡಬೇಕು ಎಂದು ಸಾವಿರಾರು ಮಂದಿ ಅಭಿಮಾನಿಗಳು, ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಒತ್ತಾಯಿಸಿದ್ದಾರೆ. ಬಾದಾಮಿಯಿಂದ ಸುಮಾರು 250ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸಿದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.ಬಾದಾಮಿಯಿಂದ ಮೂರನೇ ಬಾರಿ ಕಾರ್ಯಕರ್ತರು ಬೆಂಗಳೂರಿಗೆ ಬಂದು ಸಿದ್ದರಾಮಯ್ಯಗೆ ಒತ್ತಡ ಹೇರುತ್ತಿದ್ದಾರೆ. ಸಿದ್ದರಾಮಯ್ಯ ಈಗಾಗಲೇ ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನು ಬದಲಾವಣೆ ಮಾಡಬೇಕು. ಬಾದಾಮಿಯಿಂದಲೇ […]
ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ

ಬಾಗಲಕೋಟೆ,ಜ.18- ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಚುನಾವಣೆ ಸ್ಪರ್ಧೆ ಕುರಿತು ಮತ್ತೆ ಚರ್ಚೆ ಶುರುವಾಗಿದೆ. ಮುಂದಿನ ಚುನಾವಣೆ ಯಲ್ಲಿ ಒಂದೇ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ ಎಂದು ಪಕ್ಷ ಖಚಿತ ಪಡಿಸಿದೆ. ಬಾಗಲಕೋಟೆಯಲ್ಲಿಂದು ಮಾತನಾಡಿದ ಸಿದ್ದರಾಮಯ್ಯ ಅವರು, ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ. ಅದರಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ. ಇದೇ ವೇಳೆ ಬಾಗಲಕೋಟೆಯಲ್ಲಿಯೇ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ನೇರವಾಗಿ ಒಂದೇ […]