ಬಿಜೆಪಿಯವರಿಗೆ ಮೇಕೆದಾಟು ಬೇಕಿಲ್ಲ : ಸಿದ್ದರಾಮಯ್ಯ ಆರೋಪ

ಬೆಂಗಳೂರು, ಜ.9- ಬಿಜೆಪಿ ಸರ್ಕಾರಕ್ಕೆ ಮೇಕೆದಾಟು ಯೋಜನೆ ಜಾರಿಯಾಗುವುದು ಬೇಕಿಲ್ಲ, ಅದಕ್ಕಾಗಿ ತಮಿಳುನಾಡಿನ ಜೊತೆ ಸೇರಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಕನಕಪುರ ತಾಲ್ಲೂಕಿನ ಸಂಗಮದಿಂದ ಆರಂಭವಾದ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ 2017ರಲ್ಲಿ ಮೊದಲ ಬಾರಿಗೆ ಐದು ಸಾವಿರ ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ ತಯಾರಿಸಿ ಕೇಂದ್ರ ಜಲಶಕ್ತಿ ಅಯೋಗಕ್ಕೆ ಸಲ್ಲಿಸಲಾಗಿತ್ತು. ಕೇಂದ್ರ ಸರ್ಕಾರ ಕೆಲ ಸ್ಪಷ್ಟನೆಗಳನ್ನು ಕೇಳಿತ್ತು. 2019ರ ಜನವರಿಯಲ್ಲಿ […]