ಸರ್ಕಾರ ಏನೇ ಮಾಡಿದರೂ ಪಾದಯಾತ್ರೆ ಮಾತ್ರ ನಿಲ್ಲಲ್ಲ : ಸಿದ್ದರಾಮಯ್ಯ

ಬೆಂಗಳೂರು,ಜ.8- ರಾಮನಗರ ಜಿಲ್ಲೆಗೆ ಸೀಮಿತವಾಗಿ ಸರ್ಕಾರ 144 ಸೆಕ್ಷನ್ ಹೇರಿರುವುದು ಏನಾದರೂ ಮಾಡಿ ನಮ್ಮ ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂಬ ದುರುದ್ದೇಶವನ್ನು ತೋರಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಇಂದು ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಜರುಗಿಸುತ್ತದೋ ಜರುಗಿಸಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ ಎಂದರು. ಬಿಜೆಪಿಯವರು ಅಧಿಕಾರದಲ್ಲಿದ್ದಾರೆ. ನಾವು ಕೊರೊನಾ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ […]