“ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ನಾನೂ ಕೂಡ ನೀಡುತ್ತೇನೆ”

ಬೆಂಗಳೂರು,ನ.4- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಯಲ್ಲಿ ನಡೆದಿದ್ದ ಶಿಶುಗಳ ಸಾವಿನ ನೈತಿಕ ಹೊಣೆ ಹೊತ್ತು ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಾನು ಕೂಡ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತುಮಕೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲೆಗಳು ಇಲ್ಲದೆ ಚಿಕಿತ್ಸೆ ನೀಡಲು ವೈದ್ಯರು ನಿರಾಕರಿಸಿದ ಹಿನ್ನೆಲೆ ತಾಯಿ ಮತ್ತು ಶಿಶುಗಳು ಸಾವನ್ನಪ್ಪಿರುವುದರಿಂದ ನಾನು ನೈತಿಕ ಹೊಣೆ […]