ಐಕ್ಯತಾ ಯಾತ್ರೆಗೆ ಅಡ್ಡಿಪಡಿಸಿದರೆ ಹುಷಾರ್ : ಬಿಜೆಪಿಗೆ ಸಿದ್ದರಾಮಯ್ಯ ವಾರ್ನಿಂಗ್

ಚಾಮರಾಜನಗರ, ಸೆ.30- ಭಾರತ ಐಕ್ಯತಾ ಯಾತ್ರೆಗೆ ಅಡ್ಡಿಪಡಿಸುವ ಪ್ರಯತ್ನವನ್ನು ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಬಿಜೆಪಿಯ ಯಾವ ನಾಯಕರು ರಾಜ್ಯದಲ್ಲಿ ತಿರುಗಾಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಕೇರಳದಿಂದ ರಾಜ್ಯಕ್ಕೆ ಆಗಮಿಸಿದ ಭಾರತ ಐಕ್ಯತಾ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರ ರೀತಿಯಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 571 ಕಿ.ಮೀಗಳ ಯಾತ್ರೆಯನ್ನು ಯಾರೂ ಮಾಡಿಲ್ಲ. ಇದು ಅಭೂತಪೂರ್ವವಾದ ಕಾರ್ಯಕ್ರಮ. ಇದಕ್ಕೆ ನಮ್ಮೆಲ್ಲರ ಬೆಂಬಲ ಇರುವುದಷ್ಟೇ ಅಲ್ಲ ಸಕ್ರಿಯ ಪಾಲ್ಗೊಳ್ಳುವಿಕೆ ಬಹಳ […]