ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಮೊಟ್ಟೆ ಎಸೆತ ಪ್ರಕರಣ
ಬೆಂಗಳೂರು,ಆ.22- ರಾಜ್ಯ ರಾಜಕಾರಣದಲ್ಲಿ ಹೊತ್ತಿಕೊಂಡಿರುವ ಮೊಟ್ಟೆ ಎಸೆತ ಹಾಗೂ ಮಾಂಸ ಸೇವನೆ ಪ್ರಕರಣ ಮತ್ತಷ್ಟು ವಿವಾದ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಪ್ರಕರಣವನ್ನು ಎರಡೂ ಪಕ್ಷಗಳು ತಮ್ಮ ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಕಸರತ್ತು ನಡೆಸುತ್ತಿವೆ. ಚುನಾವಣಾ ವರ್ಷ ಆಗಿರುವುದರಿಂದ ಪ್ರಕರಣವನ್ನು ಜೀವಂತವಾಗಿಟ್ಟಷ್ಟು ಮತ ಗಳಿಕೆ ಹೆಚ್ಚಾಗುತ್ತದೆ ಎಂಬುದು ಎರಡೂ ರಾಷ್ಟ್ರೀಯ ಪಕ್ಷಗಳ ಲೆಕ್ಕಾಚಾರವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರು ಚಲಿಸುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ ಯಾವ ರಾಜಕೀಯ ಪಕ್ಷದ […]