ಸಿದ್ದು ವೈಭವದ ಅಮೃತ ಮಹೋತ್ಸವಕ್ಕೆ ಹರಿದು ಬಂದ ಜನಸಾಗರ

ದಾವಣಗೆರೆ,ಆ.3- ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವಕ್ಕೆ ಬೆಣ್ಣೆ ನಗರಿ ದಾವಣಗೆರೆ ಸಾಕ್ಷಿಯಾಯಿತು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ 75ನೇ ಜನ್ಮದಿನ ಸಮಾರಂಭವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಮೂಲೆ ಮೂಲೆಯಿಂದ ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದರು. ಇಲ್ಲಿನ ಶ್ಯಾಮನೂರು ಶಿವಶಂಕರಪ್ಪ ಮೈದಾನದಲ್ಲಿ ಏರ್ಪಡಿಸಿದ ಬೃಹತ್ ವೇದಿಕೆಯಲ್ಲಿ ಸಿದ್ದರಾಮಯ್ಯನವರ ವೈಭವದ ಅಮೃತ ಮಹೋತ್ಸವದಲ್ಲಿಪ ಪಾಲ್ಗೊಂಡ ಬಹುತೇಕ ಕಾಂಗ್ರೆಸ್ ನಾಯಕರು ಸಿದ್ದು ಗುಣಗಾನ ಮಾಡಿದರು. ಸಮಾರಂಭ ಆರಂಭವಾಗುತ್ತಿದ್ದಂತೆ ಜೈಕಾರದ ಘೋಷಣೆಗಳು ಮುಗಿಲು ಮುಟ್ಟಿದವು. ಹೌದು ಹುಲಿಯಾ ಮುಂದಿನ ಸಿಎಂ ಸಿದ್ದರಾಮಯ್ಯ […]