ಜ್ಞಾನವ್ಯಾಪಿ ಪ್ರಕರಣದಲ್ಲಿ ಮಸೀದಿ ಪರ ವಾದಿಸುತ್ತಿದ್ದ ವಕೀಲರ ನಿಧನ

ವಾರಣಾಸಿ, ಆ.1- ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಸಮಿತಿಯ ಪರ ವಕೀಲ ಅಭಯ್‍ನಾಥ್ ಯಾದವ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 62 ವರ್ಷದ ಅಭಯ್‍ನಾಥ್ ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದು ಇಂದು ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಸುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಜ್ಞಾನವಾಪಿ ಮಸೀದಿಯಲ್ಲಿ ಹಿಂದು ದೇವರ ವಿಗ್ರಹಗಳು ಮತ್ತು ದೇವಸ್ಥಾನದ ಕುರುಹುಗಳಿವೆ ಎಂದು ಪ್ರತಿಪಾದಿಸಲಾಗಿದೆ. ಸೆಷನ್ಸ್ ಕೋರ್ಟ್ ಮಸೀದಿಯಲ್ಲಿ ಜಂಟಿ ಸಮೀಕ್ಷೆ ನಡೆಸಲು ಸೂಚಿಸಿತ್ತು. ಕೋರ್ಟ್‍ನಿಂದ ನೇಮಕವಾದ ಸಮಿತಿ ಸಮೀಕ್ಷೆ ನಡೆಸುವಾಗ ನೀರಿನ ಕಾರಂಜಿಯಲ್ಲಿ ಶಿವಲಿಂಗ […]