ಬೆಂಗಳೂರಿನಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು,ಜ.23- ಭ್ರಷ್ಟಚಾರ ತೊಲಗಿಸಿ, ಬೆಂಗಳೂರು ಉಳಿಸಿ ಎಂಬ ಘೋಷಣೆಯೊಂದಿಗೆ ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ 300ಕ್ಕೂ ಹೆಚ್ಚು ಕಡೆ ಪ್ರತಿಭಟನೆ ನಡೆಸಿದೆ. ವಾರ್ಡ್‍ವಾರು ಸ್ಥಳೀಯ ನಾಯಕರು, ಮುಖಂಡರು ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರದ ಭ್ರಷ್ಟಚಾರ, ಬೆಂಗಳೂರಿನ ರಸ್ತೆಗಳ ಅವ್ಯವಸ್ಥೆ, ಶೇ.40ರಷ್ಟು ಕಮಿಷನ್ ದಂಧೆ ಸೇರಿದಂತೆ ಅನೇಕ ವಿಚಾರಗಳ ಕುರಿತಂತೆ ವಾಗ್ದಾಳಿ ನಡೆಸಿದರು. ಶಾಂತಿನಗರ ವಿಧಾನಸಭಾ ಕ್ಷೇತ್ರದ ಟ್ರಿನಿಟಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೇವಾಲ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ […]