ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ: ಸಚಿವ ಬಿ.ಸಿ ಪಾಟೀಲ್

ಬೆಂಗಳೂರು,ಅ.19- ರೈತರ ಸಿರಿಧಾನ್ಯ ಬೆಳೆಗಳಿಗೆ ಇನ್ನಷ್ಟು ಪ್ರೋತ್ಸಾಹ ನೀಡಿ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಜನವರಿ 20ರಿಂದ 22ರವರೆಗೆ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕರ್ನಾಟಕ ಸಿರಿಧಾನ್ಯ ಬೆಳೆಯಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಉತ್ಪಾದನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ಇದರ ಮಾರುಕಟ್ಟೆ ವಿಸ್ತರಣೆ ರೈತರ ಬೆಳೆಗೆ ಸೂಕ್ತ ಬೆಲೆ ನೀಡುವುದು ಸೇರಿದಂತೆ ಮತ್ತಿತರ ಸದುದ್ದೇಶಕ್ಕಾಗಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು. ಮೇಳಕ್ಕೆ […]